4:20 PM Wednesday 15 - October 2025

ವಿಪರೀತ ಕೆಮ್ಮು, ವಾಂತಿಯಿಂದ ಕಂಡೆಕ್ಟರ್ ಸಾವು!

dakshina kannada
20/08/2022

ಬೈಂದೂರು: ವಿಪರೀತ ಕೆಮ್ಮು ಹಾಗೂ ವಾಂತಿಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಅಸುನೀಗಿದ ಘಟನೆ ಬೈಂದೂರು ತಾಲೂಕಿನ ಬಿಜೂರು ಗ್ರಾಮದ ಚಾರಕೊಡ್ಲು ಎಂಬಲ್ಲಿ ಆ.19ರಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಚಾರಕೊಡ್ಲು ನಿವಾಸಿ ರಾಘವೇಂದ್ರ ಗಾಣಿಗ ಎಂದು ಗುರುತಿಸಲಾಗಿದೆ. ಇವರು ಬಸ್ ಕಂಡಕ್ಟರ್ ಆಗಿ ಕೆಲಸ ಮಾಡಿಕೊಂಡಿದ್ದು, ಕಳೆದ ಒಂದು ವಾರದಿಂದ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದರು. ಕಳೆದೆರಡು ದಿನಗಳಿಂದ ವಿಪರೀತ ಕೆಮ್ಮು  ಹಾಗೂ ವಾಂತಿ ಮಾಡುತ್ತಿದ್ದರು. ಕ್ಲಿನಿಕ್ ಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಕರೆದುಕೊಂಡು ಬಂದಿದ್ದು, ನಿನ್ನೆ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ.

ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ರಾಘವೇಂದ್ರ ಗಾಣಿಗ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version