1:10 AM Wednesday 15 - October 2025

ಆಕ್ಸಿಜನ್ ನಲ್ಲಿಯೂ ಚೌಕಾಸಿ ಮಾಡಲು ಹೊರಟ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಮುಖಭಂಗ!

suprim court
07/05/2021

ಬೆಂಗಳೂರು: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ  ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ.

ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವು ನ್ಯಾಯಯುತವಾಗಿದೆ. ಈ ಕಾರಣದಿಂದಾಗಿ ಕೇಂದ್ರ ಸರ್ಕಾರದ ಮನವಿಯನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಜ್ಯಕ್ಕೆ ಕೇಂದ್ರದಿಂದ ಒದಗಿಸಲಾಗುತ್ತಿರುವ 965 ಮೆಟ್ರಿಕ್ ಟನ್ ನಿಂದ 1,200 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ ನಡೆದ ದುರಂತದ ಬೆನ್ನಲ್ಲೇ ಹೈಕೋರ್ಟ್ ಈ ಆದೇಶ ನೀಡಿತ್ತು.

ಕರ್ನಾಟಕದ ನ್ಯಾಯಯುತವಾದ ಬೇಡಿಕೆಯನ್ನು ಪೂರೈಸುವ ಬದಲು ಕೇಂದ್ರ ಸರ್ಕಾರವು ಚೌಕಾಸಿ ಬುದ್ಧಿಯನ್ನು ತೋರ್ಪಡಿಸಿದ್ದು, ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇದೀಗ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನ ಆದೇಶವನ್ನು ಎತ್ತಿ ಹಿಡಿದೆ.

ಇತ್ತೀಚಿನ ಸುದ್ದಿ

Exit mobile version