ಕೆಂಗೇರಿ: ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಶರಣು
ಬೆಂಗಳೂರು: ಯುವಕನೊಬ್ಬ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಮ್ಮ ಮೆಟ್ರೊ ನೇರಳೆ ಮಾರ್ಗದ ಕೆಂಗೇರಿ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ.
ವಿಜಯಪುರ ಮೂಲದ ಶಾಂತನಗೌಡ ಪಾಟೀಲ ಎಂಬಾತ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಸಾವಿಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
ಈ ಘಟನೆಯಿಂದ ಮೆಟ್ರೊ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ನೇರಳೆ ಮಾರ್ಗದ ರೈಲುಗಳು ಮೈಸೂರು ರಸ್ತೆ ಮೆಟ್ರೊ ನಿಲ್ದಾಣದವರೆಗೆ ಸಂಚರಿಸಿದ್ದವು.
ಸದ್ಯ ಮತ್ತೆ ಚಲ್ಲಘಟ್ಟವರೆಗೆ ಮೆಟ್ರೊ ಸಂಚಾರ ಪುನರಾಂಭವಾಗಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ. ಜ್ಞಾನಭಾರತಿ ಮತ್ತು ಚಲ್ಲಘಟ್ಟ ನಡುವಿನ ಮೆಟ್ರೋ ಸೇವೆಗಳು ಇಂದು ಬೆಳಿಗ್ಗೆ 09:40 ಗಂಟೆಯಿಂದ ಸಂಪೂರ್ಣವಾಗಿ ಪುನರ್ ಆರಂಭಿಸಲಾಗಿದೆ. ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲುಗಳು ಈಗ ಎಂದಿನಂತೆ ಸಂಚರಿಸುತ್ತಿವೆ ಎಂದು ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























