ಕೆಂಪು ಕಲ್ಲಿನ ಅಟ್ಟಿ ಮಗುಚಿಬಿದ್ದು ಮಗು ಸಾವು - Mahanayaka

ಕೆಂಪು ಕಲ್ಲಿನ ಅಟ್ಟಿ ಮಗುಚಿಬಿದ್ದು ಮಗು ಸಾವು

baby death
01/03/2022

ಉಪ್ಪಿನಂಗಡಿ: ಮನೆಯಂಗಳದಲ್ಲಿ ಇರಿಸಲಾಗಿದ್ದ ಕೆಂಪು ಕಲ್ಲಿನ ಅಟ್ಟಿ ಮಗುಚಿ ಬಿದ್ದು ಮೂರೂವರೆ ವರ್ಷದ ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ.

ಅಶ್ರಫ್ ಮತ್ತು ಸಮೀಮಾ ದಂಪತಿಯ ಮಗ ಮೊಹಮ್ಮದ್ ನೌಶೀರ್ ಮೃತ ಮಗು. ಕಟ್ಟಡ ನಿರ್ಮಾಣಕ್ಕೆ೦ದು ಮನೆಯಂಗಳದಲ್ಲಿ ತಂದಿರಿಸಲಾಗಿದ್ದ ಕೆಂಪು ಕಲ್ಲಿನ ಅಟ್ಟಿಯ ಬಳಿ ಮಗು ನೌಶೀರ್ ಆಟವಾಡುತ್ತಿದ್ದ ವೇಳೆ ಕಲ್ಲಿನ ಅಟ್ಟಿಯು ಮಗುಚಿ ಆತನ ಮೇಲೆಯೇ ಬಿದ್ದಿದೆ ಎನ್ನಲಾಗಿದೆ.

ಮಗು ಸುತ್ತಮುತ್ತ ಕಾಣದಾದಾಗ ಮನೆ ಮಂದಿ ಹುಡುಕಾಟ ನಡೆಸಿದರು. ಈ ವೇಳೆ ಅಂಗಳದಲ್ಲಿಟ್ಟಿದ್ದ ಮಗುಚಿ ಬಿದ್ದಿರುವ ಕಲ್ಲಿನ ಅಟ್ಟಿಯನ್ನು ನೋಡಿದಾಗ ಮಗು ಕಲ್ಲಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದು ಕ೦ಡು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪೊಲೀಸರು ವಶಕ್ಕೆ

ಕಚ್ಚಾ ಬದಾಮ್ ಸಿಂಗರ್ ಭುಬನ್ ಬದ್ಯಾಕರ್ ಅಪಘಾತ

ನಟ ಚೇತನ್ ಅಹಿಂಸಾ ಬಿಡುಗಡೆ: ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಣಿಪುರದಲ್ಲಿ ಇಂದು ಮೊದಲ ಹಂತದ ಮತದಾನ

ರಷ್ಯಾ ದಾಳಿ: 14 ಮಕ್ಕಳು ಸೇರಿದಂತೆ 352 ಮಂದಿ ನಾಗರಿಕರು ಸಾವು; ಉಕ್ರೇನ್‌

 

ಇತ್ತೀಚಿನ ಸುದ್ದಿ