ಕೇರಳದಲ್ಲಿ ಪ್ರಾರ್ಥನಾ ಸಭೆಯಲ್ಲಿ ಸ್ಫೋಟ: ಓರ್ವ ಸಾವು, ಹಲವರಿಗೆ ಗಾಯ

29/10/2023
ಕೇರಳದ ಎರ್ನಾಕುಲಂನ ಕಲಮಸ್ಸೆರಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಯೆಹೋವನ ಸಾಕ್ಷಿಗಳ ಪ್ರಾರ್ಥನಾ ಸಭೆಯಲ್ಲಿ ನಡೆದ ಸರಣಿ ಸ್ಫೋಟಗಳಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದಾರೆ. ಇಂದು ಭಾನುವಾರವಾದ್ದರಿಂದ, ಸ್ಫೋಟ ಸಂಭವಿಸಿದಾಗ ಕನ್ವೆನ್ಷನ್ ಸೆಂಟರ್ ನಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿತ್ತು. ಅಕ್ಟೋಬರ್ 27 ರಂದು ಪ್ರಾರಂಭವಾದ ಮೂರು ದಿನಗಳ ಸಭೆಯ ಕೊನೆಯ ದಿನವಾಗಿತ್ತು.
ಕಲಾಮಸ್ಸೆರಿ ಸಿಐ ವಿಬಿನ್ ದಾಸ್ ಅವರು ಆರಂಭಿಕ ಸ್ಫೋಟವು ಬೆಳಿಗ್ಗೆ 9 ಗಂಟೆಗೆ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ನಂತರ ಮುಂದಿನ ಗಂಟೆಯಲ್ಲಿ ಅನೇಕ ಸ್ಫೋಟಗಳು ಸಂಭವಿಸಿವೆ. ಈ ಸ್ಫೋಟಗಳು ಸಂಭವಿಸಿದಾಗ ಪ್ರಾರ್ಥನಾ ಸಭೆಯಲ್ಲಿ 2,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಅಂದಾಜಿಸಲಾಗಿದೆ.