ವಾರ್ನ್: ಶಬರಿಮಲೆಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಗೆ ಕೇರಳ ಮುಖ್ಯಮಂತ್ರಿ ಸೂಚನೆ

13/12/2023

ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ. ಅವ್ಯವಸ್ಥೆಯ ಆರೋಪ ಕೇಳಿಬಂದಿದ್ದು, ಹೀಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಜನಸಂದಣಿ ನಿರ್ವಹಣಾ ಕ್ರಮಗಳಿಗೆ ಕರೆ ನೀಡಿದ್ದಾರೆ.

ತೆಕ್ಕಡಿಯಲ್ಲಿ ನಡೆದ ವಿಶೇಷ ಪರಿಶೀಲನಾ ಸಭೆಯಲ್ಲಿ, ಮುಖ್ಯಮಂತ್ರಿಗಳು ದೇವಾಲಯದ ಪ್ರಸ್ತುತ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದರು. ಯಾತ್ರಾರ್ಥಿಗಳಿಗೆ ಯಾವುದೇ ಹಾನಿಯಾಗದಂತೆ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಭೆಯಲ್ಲಿ ದೇವಸ್ವಂ ಸಚಿವ ಕೆ.ರಾಧಾಕೃಷ್ಣನ್, ಅರಣ್ಯ ಸಚಿವ ಎ.ಕೆ.ಶಶೀಂದ್ರನ್, ಮುಖ್ಯ ಕಾರ್ಯದರ್ಶಿ ಡಾ.ವಿ.ವೇಣು, ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್.ಪ್ರಶಾಂತ್, ರಾಜ್ಯ ಪೊಲೀಸ್ ಮುಖ್ಯಸ್ಥ ಶೇಖ್ ದರ್ವೇಶ್ ಸಾಹಿಬ್, ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳು ಆನ್ ಲೈನ್ ನಲ್ಲಿ ಭಾಗವಹಿಸಿದ್ದರು.
ಮಂಡಲ ಪೂಜೆಯ ಮೊದಲ 19 ದಿನಗಳಲ್ಲಿ ಸರಾಸರಿ ದೈನಂದಿನ ಯಾತ್ರಾರ್ಥಿಗಳ ಸಂಖ್ಯೆ 62,000 ಆಗಿತ್ತು. ಇದು ಡಿಸೆಂಬರ್ 6 ರಿಂದ ನಾಲ್ಕು ದಿನಗಳಲ್ಲಿ 88,000 ಕ್ಕೆ ಏರಿತ್ತು.

ಇದು ಜನದಟ್ಟಣೆಗೆ ಕಾರಣವಾಯಿತು ಎಂದು ಅಂಕಿಅಂಶಗಳು ಬಹಿರಂಗಪಡಿಸಿವೆ.
ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ದರ್ಶನದ ಸಮಯವನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ಹೆಚ್ಚುವರಿಯಾಗಿ, ಸ್ಪಾಟ್ ಬುಕಿಂಗ್ ಅನ್ನು ಅಗತ್ಯ ಪ್ರಕರಣಗಳಿಗೆ ಮಾತ್ರ ಸೀಮಿತಗೊಳಿಸಬೇಕೆಂದು ಮುಖ್ಯಮಂತ್ರಿ ಶಿಫಾರಸು ಮಾಡಿದರು.

ಶಬರಿಮಲೆಯಲ್ಲಿ ದರ್ಶನಕ್ಕೆ ಅನುಕೂಲವಾಗುವಂತೆ ಈ ಹಿಂದಿನ ಸಮಾಲೋಚನಾ ಸಭೆಗಳನ್ನು ಉಲ್ಲೇಖಿಸಲಾಗಿದ್ದು, ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಒತ್ತು ನೀಡಲಾಗಿದೆ. ಮಹಿಳೆಯರು ಮತ್ತು ಮಕ್ಕಳಿಗಾಗಿ ಸಿದ್ಧಪಡಿಸಿದ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

Exit mobile version