ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ರದ್ದು

ಯೆಮೆನ್: ಭಾರತದ ಕೇರಳದ ನರ್ಸ್ ನಿಮಿಷಾ ಪ್ರಿಯಾಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಸ್ಥಾಪಕ ಡಾ.ಕೆ.ಎ.ಪೌಲ್ ತಿಳಿಸಿದ್ದಾರೆ.
ಸೋಮವಾರ ಯೆಮೆನ್ ನ ಸನಾದಿಂದ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಪೌಲ್ ಅವರು ಯೆಮೆನ್ ನಾಯಕತ್ವದ ಶಕ್ತಿಯುತ ಪಾರ್ಥನೆ, ಪ್ರಯತ್ನಗಳಿಂದ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ದೇವರ ದಯೆಯಿಂದ ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಲಾಗಿದೆ. ಅವರನ್ನು ಬಿಡುಗಡೆ ಮಾಡಿ, ಭಾರತಕ್ಕೆ ಕರೆದೊಯ್ಯಲಾಗುವುದು ಎಂದು ವಿಡಿಯೋದಲ್ಲಿ ಹೇಳಿದ್ದು, ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ಹೇಳಲು ಬಯಸುವುದಾಗಿ ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ನಿಮಿಷ ಪ್ರಿಯಾ ಮರಣ ದಂಡನೆ ರದ್ದುಗೊಳಿಸಿರುವ ಬಗ್ಗೆ ಯೆಮೆನ್, ಭಾರತ ಸರ್ಕಾರ, ನಿಮಿಷಾ ಪ್ರಿಯಾ ಕುಟುಂಬಸ್ಥರಾಗಲಿ ಈವರೆಗೆ ಅಧಿಕೃತ ಹೇಳಿಕೆ ನೀಡಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD