ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿಯನ್ನು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ ಕೇರಳ ಪೊಲೀಸರು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಲವು ಪ್ರಕರಣ ಸಂಬಂಧ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ವಿಚಾರಣೆಯನ್ನು ಮುಂದಿನ ತಿಂಗಳು 21ಕ್ಕೆ ಜೆಎಂಎಫ್ ಸಿ ನ್ಯಾಯಲಯ ಮುಂದೂಡಿದೆ.
ರಾಜ್ಯದಲ್ಲಿ ನಕ್ಸಲ್ ನಾಯಕತ್ವ ವಹಿಸಿದ್ದ ಬಿ.ಜಿ. ಕೃಷ್ಣಮೂರ್ತಿ, ಕೇರಳದಲ್ಲಿ ಪೊಲೀಸರಿಗೆ ಶರಣಾಗಿದ್ದರು. ಸಾಕೇತ್ ರಾಜನ್ ನಂತರ ಒಂದೂವರೆ ದಶಕ ನಾಯಕತ್ವ ವಹಿಸಿಕೊಂಡಿದ್ದ ಬಿ.ಜಿ. ಕೃಷ್ಣಮೂರ್ತಿ ಕಳೆದ ವರ್ಷ ಕೇರಳದಲ್ಲಿ ಶರಣಾಗತಿಯಾಗಿದ್ದರು.
ನಕ್ಸಲ್ ಚಟುವಟಿಕೆ ಸಂಬಂಧ ಕೃಷ್ಣಮೂರ್ತಿ ಮೇಲೆ 66 ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು—ಉಡುಪಿ–ದಕ್ಷಿಣ ಕನ್ನಡದಲ್ಲಿಯೂ ಬಿ.ಜಿ. ಕೃಷ್ಣಮೂರ್ತಿ ವಿರುದ್ದ ಪ್ರಕರಣ ದಾಖಲಾಗಿದೆ. ದಶಕದ ಹಿಂದೆ ಕೇರಳದತ್ತ ಬಿ.ಜಿ. ಕೃಷ್ಣಮೂರ್ತಿ ಹಾಗೂ ಇತರೇ ನಕ್ಸಲರು ಮುಖ ಮಾಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD