10:54 PM Thursday 15 - January 2026

ಶಾವರ್ಮಾ ಸೇವಿಸಿ 16 ವರ್ಷದ ಬಾಲಕಿ ಸಾವು: 36 ಮಂದಿ ಅಸ್ವಸ್ಥ

shawarma
02/05/2022

ಕಾಸರಗೋಡು: ಶಾವರ್ಮಾ ಸೇವಿಸಿ 16 ವರ್ಷದ ಬಾಲಕಿ ಸಾವನ್ನಪ್ಪಿ,  ಹಲವರು ಅಸ್ವಸ್ಥಗೊಂಡಿರುವ ಘಟನೆ  ಕಾಸರಗೋಡಿನ  ಚೆರುವತ್ತೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದೆ.

16 ವರ್ಷ ವಯಸ್ಸಿನ ಬಾಲಕಿ ದೇವಾನಂದ ಮೃತಪಟ್ಟ ಬಾಲಕಿಯಾಗಿದ್ದು, ಇದೇ  ಹೊಟೇಲ್ ನಲ್ಲಿ ಶಾವರ್ಮಾ ಸೇವಿಸಿದ ಸುಮಾರು 36 ಮಂದಿ ಅಸ್ವಸ್ಥರಾಗಿದ್ದು,  ಇವರೆಲ್ಲರೂ ಕಾಞಂಗಾಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಾವರ್ಮಾ ತಯಾರಿಸಿದ ಓರ್ವ ಅಡುಗೆ  ಸಿಬ್ಬಂದಿ ಹಾಗೂ ಹೊಟೇಲ್ ನ ಮ್ಯಾನೇಜರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಬಾಲಕಿಯ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು,  ಆರೋಗ್ಯ ಮತ್ತು ಕಂದಾಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಹೊಟೇಲ್ ಗೆ ಭೇಟಿ ನೀಡಿರುವ ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರದ ಮಾದರಿಗಳನ್ನು ಸಂಗ್ರಹಿಸಿದ್ದಾರೆ.  ಇದರ ಬೆನ್ನಲ್ಲೇ ಘಟನೆಯ ಕುರಿತು ತಕ್ಷಣವೇ ವರದಿ ನೀಡುವಂತೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆಹಾರ ಸುರಕ್ಷತೆಯ ಬಗ್ಗೆ ತಪಾಸಣೆ ನಡೆಸಲಾಗುವುದು. ಆಹಾರ ಸುರಕ್ಷತೆ ಕಾನೂನು ಉಲ್ಲಂಘಿಸಿ ಆಹಾರ ತಯಾರಿಸಿದರೆ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆ್ಯಸಿಡ್ ದಾಳಿ ಆರೋಪಿ ನಾಗೇಶ್ ನ ಬೈಕ್ ಪತ್ತೆ!

ಕುಟುಂಬ ರಾಜಕಾರಣವನ್ನು ಏಡ್ಸ್ ಗೆ ಹೋಲಿಸಿದ ಯತ್ನಾಳ್!

ಬಸ್ಸಿನಿಂದ  ಕೆಸರು ಹಾರಿದ್ದಕ್ಕೆ ಚಾಲಕನಿಗೆ ವ್ಯಕ್ತಿಯಿಂದ ಚಪ್ಪಲಿಯೇಟು!

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ: ಸ್ವಲ್ಪ ತಡವಾಗಿದ್ದರೆ ನಡೆಯುತ್ತಿತ್ತು ಭಾರೀ ದುರಂತ!

ಕೋಟ್ಯಂತರ ರೂಪಾಯಿಯ ಪಾನ್ ಮಸಾಲ ಜಾಹೀರಾತಿನ ಆಫರ್ ನಿರಾಕರಿಸಿದ ಯಶ್!

ಇತ್ತೀಚಿನ ಸುದ್ದಿ

Exit mobile version