ಕೇರಳ-ತಮಿಳುನಾಡಿನಲ್ಲೂ ಧ್ವಜ ಹಾರಿಸುತ್ತೇವೆ ಎಂದ ಸಿ.ಟಿ.ರವಿ! - Mahanayaka

ಕೇರಳ-ತಮಿಳುನಾಡಿನಲ್ಲೂ ಧ್ವಜ ಹಾರಿಸುತ್ತೇವೆ ಎಂದ ಸಿ.ಟಿ.ರವಿ!

21/10/2020


Provided by

ಹುಬ್ಬಳ್ಳಿ: ಮುಂದಿನ ಚುನಾವಣೆಯಲ್ಲಿ ಕೇರಳ ಹಾಗೂ ತಮಿಳುನಾಡಿನಲ್ಲೂ ಬಾವುಟ ಹಾರಿಸುತ್ತೇವೆ ಎಂದು  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

 ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಪಕ್ಷವು ದಕ್ಷಿಣ ರಾಜ್ಯಗಳಲ್ಲಿ ಮಾತ್ರವಲ್ಲ, ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿಯೂ ವಿಜಯ ಮೆರವಣಿಗೆ ನಡೆಸಲು ಸಜ್ಜಾಗಿದೆ ಎಂದು ಹೇಳಿದರು.

ದಕ್ಷಿಣ ರಾಜ್ಯಗಳ ಮುಂದಿನ ವಿಧಾನ ಸಭಾ ಚುನಾವಣೆಗಳಲ್ಲಿ ಅಪೇಕ್ಷಿತ ಫಲಿತಾಂಶಗಳನ್ನು ಸಾಧಿಸಲು ನಾವು ಕೆಲಸ ಮಾಡುತ್ತಿದ್ದೇವೆ. ಈ ಕ್ಷೇತ್ರಗಳಲ್ಲಿ ನಾವು ಇಲ್ಲಿಯವರೆಗೆ ಗೆದ್ದಿಲ್ಲ. ದಕ್ಷಿಣ ರಾಜ್ಯಗಳ ಉಸ್ತುವಾರಿಯಾಗಿರುವ ನನಗೆ ಉಸ್ತುವಾರಿ ನೀಡಿದ ಈ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ