ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಸ್ನೇಹಿತರಿಂದಲೇ ಅತ್ಯಾಚಾರ: ಆರೋಪಿಗಳು ಅರೆಸ್ಟ್ - Mahanayaka

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಸ್ನೇಹಿತರಿಂದಲೇ ಅತ್ಯಾಚಾರ: ಆರೋಪಿಗಳು ಅರೆಸ್ಟ್

25/02/2024

ಎರಡು ದಿನಗಳ ಹಿಂದೆ ಕೇರಳ ರಾಜ್ಯದ ಪತ್ತನಂತಿಟ್ಟ ಜಿಲ್ಲೆಯಿಂದ 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಪೊಲೀಸರು ಮೂವರನ್ನು ರವಿವಾರ ಬಂಧಿಸಿದ್ದಾರೆ.
ಆರೋಪಿಗಳನ್ನು ಅತುಲ್ (21), ಅಜಿಲ್ (21) ಮತ್ತು ಜಯರಾಜ್ ಎಂದು ಗುರುತಿಸಲಾಗಿದೆ. ಈ ಮೂವರು ಆರೋಪಿಗಳು ತ್ರಿಶೂರ್‌ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 23 ರಂದು ನಾಪತ್ತೆಯಾಗಿದ್ದ ಬಾಲಕಿ ಭಾನುವಾರ ಮುಂಜಾನೆ 4 ಗಂಟೆಗೆ ತಿರುವಳ್ಳ ಪೊಲೀಸ್ ಠಾಣೆಗೆ ಬಂದಿದ್ದಳು. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಸ್ನೇಹಿತರೇ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು  ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ