ಕೇರಳದಲ್ಲಿ ‘ಮೆದುಳು ತಿನ್ನುವ ಅಮೀಬಾ ಸೋಂಕಿನ’ ಭೀತಿ: ಗಡಿಭಾಗದಲ್ಲಿ ಕಟ್ಟೆಚ್ಚರ

ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ನಾಲ್ಕರು ಬಲಿಯಾಗಿದ್ದು, ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೇ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ.
ಕಲುಷಿತ ನೀರಿನಲ್ಲಿ ಕಂಡುಬರುವ ನೆಗ್ಗೇರಿಯಾ ಫೌಲೇರಿ ಹೆಸರಿನ ಅಪರೂಪದ ಹಾಗೂ ಅಪಾಯಕಾರಿ ಅಮೀಬಾದಿಂದ ಉಂಟಾಗುವ ಅಪರೂಪದ ಮೆದುಳಿನ ಸೋಂಕಿಗೆ ಕೇರಳದಲ್ಲಿ ಈಗಾಗಲೇ ನಾಲ್ವರು ಬಲಿಯಾಗಿದ್ದಾರೆ. . ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ.
ಸೋಂಕು ಹರಡುವ ಆತಂಕದ ಹಿನ್ನೆಲೆ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮಳೆ ನೀರು ನಿಂತ ಹೊಂಡಗಳಲ್ಲಿ, ಸ್ವಿಮ್ಮಿಂಗ್ ಫೂಲ್ ನಲ್ಲಿ ಕಲುಷಿತ ನೀರಿನಲ್ಲಿ ಈಜಾಡದಂತೆ ಸೂಚನೆ ನೀಡಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth