11:04 AM Saturday 23 - August 2025

ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

shivamogga
07/02/2022

ಶಿವಮೊಗ್ಗ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಶಿವಮೊಗ್ಗಕ್ಕೂ ಕಾಲಿಟ್ಟಿದ್ದು, ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೂಡ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮನವೊಲಿಸಲು ಮುಂದಾದರೂ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್ ಗೆ ಅವಕಾಶ ನೀಡದಂತೆ ಹಾಗೂ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳನ್ನು ಹೊರಗಿಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಗುಂಪೊಂದು ಆಗ್ರಹಿಸಿದೆ ಎಂದು ವರದಿಯಾಗಿದೆ.

ಇನ್ನೂ ವಿದ್ಯಾರ್ಥಿಗಳ ಮನವೊಲಿಸಲು ಕಾಲೇಜಿನ ಪ್ರಾಂಶುಪಾಲರು ಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿಗಳು ವಂದೇ ಮಾತರಂ ಹಾಗೂ ಜೈಶ್ರೀರಾಮ್ ಎಂದು ಕೂಗಿದ್ದಾರೆ ಎನ್ನಲಾಗಿದೆ.

ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಸಹ್ಯಾದ್ರಿ ವಾಣಿಜ್ಯ ಕಾಲೇಜು ಬಳಿ ಪೊಲೀಸರು ಆಗಮಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಲಾವಿದೆಯರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸಿದ ಆರ್ಕೇಸ್ಟ್ರಾ ಮಾಲಕ: ದೂರು ದಾಖಲು

ವಿಚ್ಛೇದನ ನೀಡಿಲ್ಲವೆಂದು ಪ್ರೀತಿಸಿ ಮದುವೆಯಾದವಳನ್ನೇ ಕೊಲೆಗೈದ ಪತಿ

ಬ್ರಾಹ್ಮಣ ಅನ್ನೋದು ಜಾತಿಯಲ್ಲ, ಅದು ಉನ್ನತ ಜೀವನ ವಿಧಾನ: ಬಿಜೆಪಿ ಹಿರಿಯ ನಾಯಕ ದಿನೇಶ್ ಶರ್ಮಾ

ಹಿರಿಯ ನಟ ಅಶ್ವತ್ಥ್​ ನಾರಾಯಣ್​ ಇನ್ನಿಲ್ಲ

ಇತ್ತೀಚಿನ ಸುದ್ದಿ

Exit mobile version