8:00 PM Wednesday 10 - December 2025

ಲಕ್ಕಿ ಡ್ರಾ ಹೆಸರಿನಲ್ಲಿ ಮೊಬೈಲ್ ಬದಲು ಕೆಟ್ಟು ಹೋದ ತಿಂಡಿಯ ಪೊಟ್ಟಣ ಕಳುಹಿಸಿ ವಂಚನೆ

mobile parcel
13/09/2022

ಮೊಬೈಲ್ ಫೋನ್ ಬದಲು ಕೆಟ್ಟುಹೋದ ತಿಂಡಿಯ ಪೊಟ್ಟಣ ಕಳುಹಿಸಿ ವಂಚನೆ ಮಾಡಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.

ಅದೃಷ್ಟ ಗ್ರಾಹಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ 8,800 ರೂಪಾಯಿ ಮೌಲ್ಯದ ಮೊಬೈಲನ್ನು 1,785 ಕ್ಕೆ ಕಳುಹಿಸಲಾಗಿದೆ ಎಂಬ ಮೆಸೇಜ್ ಅನ್ನು ನಂಬಿ ಅಂಚೆ ಮೂಲಕ ಬಂದ ಪಾರ್ಸೆಲ್ ಖರೀದಿಸಿದ ವ್ಯಕ್ತಿಗೆ ಮೊಬೈಲ್ ಬದಲು ಕೆಟ್ಟು ಹೋದ ತಿಂಡಿಯ ಪೊಟ್ಟಣ ಕಳುಹಿಸಿ ವಂಚಿಸಲಾಗಿದೆ.

ಉಪ್ಪಿನಂಗಡಿಯ ದೇವಸ್ಥಾನವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಶಂಕರ್  ಎಂಬುವವರು ಇತ್ತೀಚೆಗಷ್ಟೇ ತನ್ನ ಮನೆ ಮಂದಿಗೆಂದು ಮೂರು ವಿವೋ ಕಂಪೆನಿಯ ಮೊಬೈಲನ್ನು ಖರೀದಿಸಿದ್ದರು. ಇದರ ಬಳಿಕ ಸಂಸ್ಥೆಯ ಅಧಿಕಾರಿ ಎಂದು ಅವರ ಮೊಬೈಲ್ ಗೆ ಕಾಲ್ ಮಾಡಿದ ವ್ಯಕ್ತಿ, ಮೂರು ಮೊಬೈಲ್ ಖರೀದಿಸಿದ್ದಕ್ಕೆ ಸಂಸ್ಥೆಯ ಲಕ್ಕಿ ಗ್ರಾಹಕರಾಗಿ ನೀವು ಆಯ್ಕೆಯಾಗಿದ್ದೀರಿ. ಈ ಹಿನ್ನೆಲೆಯಲ್ಲಿ 8,800 ರೂಪಾಯಿ ಬೆಲೆಯ ಮೊಬೈಲ್ ಕೇವಲ 1,785  ರೂಪಾಯಿಗೆ ಕಳುಹಿಸಲಾಗುವುದು. ಹಣ ತೆತ್ತು ಅಂಚೆ ಕಚೇರಿಯಿಂದ ಪಡೆದುಕೊಳ್ಳಿ’ ಎಂದು ತಿಳಿಸಿದ್ದರು.

ತಾನು ಫೋನ್ ಖರೀದಿಸಿರುವುದು  ನಿಜವಾಗಿರುವಾಗ ನನಗೆ ಅದೃಷ್ಟ ಒಲಿದಿರುವುದು  ನಿಜವಾಗಿರಬಹುದೆಂದು ನಂಬಿದ ಭವಾನಿ ಶಂಕರ್  ಉಪ್ಪಿನಂಗಡಿ ಅಂಚೆ ಕಚೇರಿಗೆ ಬಂದ ಪಾರ್ಸೆಲ್ ಅನ್ನು  ಹಣ ತೆತ್ತು ಪಡೆದುಕೊಂಡರಲ್ಲದೆ,  ಸಂದೇಹ ಬಗೆಹರಿಸಲು ಅಲ್ಲಿಯೇ ಪಾರ್ಸೆಲ್ ಅನ್ನು ತೆರೆದು ನೋಡಿದಾಗ ಕೆಟ್ಟು ಹೋದ ತಿಂಡಿಯ ಪೊಟ್ಟಣವನ್ನು ಪ್ಯಾಕ್ ಮಾಡಿ ಕಳುಹಿಸಿರುವುದು ಕಂಡು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version