ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಕಾರಿಗೆ ಟ್ಯಾಂಕರ್ ಡಿಕ್ಕಿ - Mahanayaka
11:33 AM Friday 19 - December 2025

ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಕಾರಿಗೆ ಟ್ಯಾಂಕರ್ ಡಿಕ್ಕಿ

18/11/2020

ಮೇಲ್ಮರವತ್ತೂರ್:  ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಖುಷ್ಬೂ ಅವರು ಕಡಲೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲ್ ಮರವತ್ತೂರ್ ಸಮೀಪ ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

ನಿಮ್ಮೆಲ್ಲರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನಾನು ಪ್ರಯಾಣಿಸುತ್ತಿದ್ದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನನ್ನ ಪತಿ ನಂಬಿರುವ ದೇವರು ಮುರುಗನ್ ನಮ್ಮನ್ನು ಬದುಕಿಸಿದ ಎಂದು ಖುಷ್ಬೂ ಸುಂದರ್ ಟ್ವೀಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿ