ನಟ ಕಿಚ್ಚ ಸುದೀಪ್ ಆರೋಗ್ಯ ಸ್ಥಿತಿ ಈಗ ಹೇಗಿದೆ ಗೊತ್ತಾ?

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ತಾವು ಗುಣಮುಖರಾಗಿರುವುದಾಗಿ ಇಂದು ಸುದೀಪ್ ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿತ್ತು. ಶೂಟಿಂಗ್ ಚಟುವಟಿಕೆಗಳಿಗೆ ಸಂಪೂರ್ಣ ಸ್ಥಗಿತಗೊಳಿಸಿದ ಅವರು ವಿಶ್ರಾಂತಿ ಪಡೆಯುತ್ತಿದ್ದರು.
ಇದೀಗ ಗುಣಮುಖರಾಗಿರುವ ಕಿಚ್ಚ ಸುದೀಪ್, ತಮ್ಮ ಆರೋಗ್ಯದ ಕಾಳಜಿ ವಹಿಸಿದ ಡಾ.ವೆಂಕಟೇಶ್, ಡಾ.ವಿನಯ್ ಅವರಿಗೂ ಸುದೀಪ್ ಧನ್ಯವಾದ ಹೇಳಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಿದ, ಹಾರೈಸಿದ ಹಲವಾರು ವಿಡಿಯೋ ತುಣುಕುಗಳು, ಸಂದೇಶಗಳನ್ನು ನಾನು ನೋಡಿದ್ದೇನೆ. ಎಲ್ಲರಿಗೂ ಧನ್ಯವಾದಗಳು, ಐ ಲವ್ ಯು ಆಲ್ ಎಂದಷ್ಟೇ ಹೇಳಬಲ್ಲೆ ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.
ಅನಾರೋಗ್ಯಕ್ಕೀಡಾದ ಸುದೀಪ್ ಬಿಗ್ ಬಾಗ್ ವಾರಾಂತ್ಯದ ಸರಣಿ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಸುದೀಪ್ ಆರೋಗ್ಯಕ್ಕೆ ಏನಾಗಿದೆ ಎಂದು ತಿಳಿಯದೆ ಗೊಂದಲವಾಗಿತ್ತು. ಸುದೀಪ್ ಅವರ ಪತ್ನಿ ಹೇಳಿಕೆಯೊಂದನ್ನು ನೀಡಿ, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಆದರೆ ಕಿಚ್ಚ ಸುದೀಪ್ ಅವರನ್ನು ಕಾಡಿದ ಅನಾರೋಗ್ಯ ಏನು ಎನ್ನುವುದು ಇನ್ನು ತಿಳಿದು ಬಂದಿಲ್ಲ.