ಕಿಡಿಗೇಡಿಗಳಿಂದ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲೆಸೆತ - Mahanayaka
9:59 PM Thursday 15 - January 2026

ಕಿಡಿಗೇಡಿಗಳಿಂದ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲೆಸೆತ

kallesetha
14/02/2022

ಬೆಳಗಾವಿ: ಕಿಡಿಗೇಡಿಗಳು ಉತ್ತರ ಮತ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಕಲ್ಲು ಎಸೆದು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ಘಟನೆ ನಡೆದಿದೆ.
ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಕಚೇರಿ ಮೇಲೆ ಕಲ್ಲೆಸೆದಿದ್ದು, ಇದರಿಂದ ಕಿಟಕಿಯ ಗಾಜು ಪುಡಿಪುಡಿಯಾಗಿವೆ. ಕಲ್ಲು ತೂರಾಟ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ‌.
ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಮಾರ್ಕೆಟ್ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.‌ ಪಾನಮತ್ತ ಯುವಕರು ಕಲ್ಲು ತೂರಾಟ ನಡೆಸಿರಬಹುದು ಎಂದು ಶಂಕಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಚೇರಿ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮನೆ ಮುಂದೆ ಅಕ್ರಮ ಕಟ್ಟಡ , ಬಡ ಕುಟುಂಬಕ್ಕೆ ದಿಗ್ಬಂಧನ | ಗ್ರಾ.ಪಂ. ಸದಸ್ಯನ ದೌರ್ಜನ್ಯ ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರ ವರೆಗೆ ರಜೆ ವಿಸ್ತರಣೆ

ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣ: ವಕೀಲ ಜಗದೀಶ್ ಅರೆಸ್ಟ್

ಸಿಡಿದೆದ್ದ ಸಂವಿಧಾನ ಪರ ಸಂಘಟನೆಗಳು:  ಫೆ.19ರಂದು “ವಿಧಾನ ಸೌಧ-ಹೈಕೋರ್ಟ್ ಚಲೋ”ಗೆ ಕರೆ

 

ಇತ್ತೀಚಿನ ಸುದ್ದಿ