ಕಿಡಿಗೇಡಿಗಳಿಂದ ಜೋಗಿಮಟ್ಟಿ ಗಿರಿಧಾಮಕ್ಕೆ ಬೆಂಕಿ: ಅಪಾರ ಔಷಧಿ ಸಸಿಗಳು ನಾಶ - Mahanayaka
6:15 AM Tuesday 9 - September 2025

ಕಿಡಿಗೇಡಿಗಳಿಂದ ಜೋಗಿಮಟ್ಟಿ ಗಿರಿಧಾಮಕ್ಕೆ ಬೆಂಕಿ: ಅಪಾರ ಔಷಧಿ ಸಸಿಗಳು ನಾಶ

jogi matti
27/03/2022

ಚಿತ್ರದುರ್ಗ: ನಗರದ ಜೋಗಿಮಟ್ಟಿ ಗಿರಿಧಾಮಕ್ಕೆ ನಿನ್ನೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಾಕಿರುವ ಹಿನ್ನೆಲೆಯಲ್ಲಿ ಅಪಾರ ಔಷಧಿ ಸಸಿಗಳು, ಗಿಡಮೂಲಿಕೆಗಳು ಹಾಗೂ ಕೆಲ ಬೆಲೆಬಾಳುವ ಗಿಡಮರಗಳು ನಾಶವಾಗಿವೆ.


Provided by

ಒಣಹುಲ್ಲಿಗೆ ಬೆಂಕಿ ತಗುಲಿದ ಪರಿಣಾಮ ಜೋಗಿಮಟ್ಟಿ ಅರಣ್ಯಧಾಮದಲ್ಲಿದ್ದ ಅಪಾರ ಔಷಧಿ ಸಸಿಗಳು, ಗಿಡಮೂಲಿಕೆಗಳು ಹಾಗೂ ಕೆಲ ಬೆಲೆಬಾಳುವ ಗಿಡಮರಗಳು ಸುಟ್ಟು ಭಸ್ಮವಾಗಿದೆ. ಹೀಗಾಗಿ ಕೋಟೆನಾಡಿನ ಪರಿಸರವಾದಿಗಳು ಕಿಡಿಗೇಡಿಗಳ ದುಷ್ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳವು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ,  ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕ್ಷಣಾರ್ಧದಲ್ಲೇ ಆಡುಮಲ್ಲೇಶ್ವರ ರಸ್ತೆಯ ಸದ್ಗುರು ಸೇವಾಶ್ರಮದವರೆಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಶ್ರೀಗಂಧ ಬೆಳೆಗಾರರಿಂದ ಅರೆಬೆತ್ತಲೆ ಪ್ರತಿಭಟನೆ

ಚಾರ್ಜಿಂಗ್ ವೇಳೆ ಎಲೆಕ್ಟ್ರಿಕ್ ಬೈಕ್ ಸ್ಫೋಟ: ತಂದೆ, ಮಗಳ ದುರಂತ ಸಾವು

ಎಷ್ಟು ವಯಸ್ಸಿನವರು ಎಷ್ಟು ಹೊತ್ತು ನಿದ್ರಿಸಬೇಕು? | ತಜ್ಞರು ಏನಂತಾರೆ ನೋಡಿ…

ಮನೆಗೆ ಬೆಂಕಿಯಿಟ್ಟು 8 ಮಂದಿಯ ಹತ್ಯೆ ಪ್ರಕರಣ: 21 ಆರೋಪಿಗಳ ಬಂಧನ |  ತನಿಖೆ ಆರಂಭಿಸಿದ ಸಿಬಿಐ

ಇತ್ತೀಚಿನ ಸುದ್ದಿ