ಮಕ್ಕಳ ರಕ್ಷಣಾ ಕೇಂದ್ರದಲ್ಲಿದ್ದ ಬಾಲಕಿಯ ಅಪಹರಣ: ಆರೋಪಿಯ ಬಂಧನ

mala maruti
09/08/2025

ಬೆಳಗಾವಿ: ಮಕ್ಕಳ ರಕ್ಷಣಾ ಕೇಂದ್ರದಲ್ಲಿದ್ದ ಬಾಲಕಿಯನ್ನು ಅಪಹರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿವರ:  13ನೇ ವಯಸ್ಸಿಗೆ ಬಾಲಕಿಯನ್ನು ಆರೋಪಿ ಜೊತೆಗೆ ಬಾಲ್ಯ ವಿವಾಹ ಮಾಡಲಾಗಿತ್ತು. ಆಸ್ಪತ್ರೆಗೆ ಹೋದ ವೇಳೆ ಬಾಲಕಿ 4 ತಿಂಗಳ ಗರ್ಭಿಣಿ ಎನ್ನುವುದು ಪತ್ತೆಯಾಗಿತ್ತು. ಹೀಗಾಗಿ ಬಾಲಕಿಯನ್ನು ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಮಕ್ಕಳ ರಕ್ಷಣಾ ಕೇಂದ್ರದಲ್ಲಿ ಇರಿಸಲಾಗಿತ್ತು.

ಈ ರಕ್ಷಣಾ ಕೇಂದ್ರದಲ್ಲಿ ಸಿಸಿಟಿವಿ ಮತ್ತು ಸೆಕ್ಯೂರಿಟಿ ಗಾರ್ಡ್ ಕೂಡ ಇಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿ ತಾನು ಬಾಲಕಿಯ ಚಿಕ್ಕಪ್ಪ ಎಂದು ಸುಳ್ಳು ಹೇಳಿ ಔಷಧಿ ಕೊಡುವ ನೆಪದಲ್ಲಿ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾನೆ. ಬಳಿಕ ಸಿಬ್ಬಂದಿಗೆ ಚಾಕು ತೋರಿಸಿ ಬೆದರಿಸಿ ಬಾಲಕಿಯನ್ನು ಅಪಹರಿಸಿ ಎಸ್ಕೇಪ್ ಆಗಿದ್ದ.

ಮಕ್ಕಳ ರಕ್ಷಣಾ ಕೇಂದ್ರದ ಸಿಬ್ಬಂದಿಯಿಂದ ಮಾಳಮಾರುತಿ ಠಾಣೆಗೆ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗಟ್ಟಿದ್ದಾರೆ. ಸದ್ಯ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version