ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಲಾರಿ ಹರಿಸಿ ಹತ್ಯೆ! - Mahanayaka

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಲಾರಿ ಹರಿಸಿ ಹತ್ಯೆ!

Ramappa Pujar
14/05/2025

ದಾವಣಗೆರೆ: ಲಾರಿ ಹರಿದ ಪರಿಣಾಮ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ.

ಡಿಎಆರ್ ಕಾನ್ಸ್ ಟೇಬಲ್ ರಾಮಪ್ಪ ಪೂಜಾರ್(27) ಮೃತ ಪಟ್ಟವರಾಗಿದ್ದಾರೆ. ಹೆಬ್ಬಾಳು ಟೋಲ್ ಗೇಟ್ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಲಾರಿಯನ್ನು ತಪಾಸಣೆ ಮಾಡಲು ಹೋದ ವೇಳೆ ಲಾರಿ ಚಾಲಕ ರಾಮಪ್ಪ ಪೂಜಾರ್ ಮೇಲೆಯೇ ಲಾರಿ ಹರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರಾಮಪ್ಪ ಪೂಜಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ಡಿವೈಎಸ್ಪಿ ಶರಣಬಸವೇಶ್ವರ ಹಾಗೂ ಸಿಬ್ಬಂದಿ ಆಸ್ಪತ್ರೆಗೆ ಧಾವಿಸಿ ಮಾಹಿತಿ ಪಡೆದರು. ಸದ್ಯ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ