ದೊಣ್ಣೆಯಿಂದ ಹೊಡೆದು ವ್ಯಕ್ತಿಯ ಹತ್ಯೆ: ಇಬ್ಬರು ಅರೆಸ್ಟ್

06/02/2024
ನೆಲಮಂಗಲ: ಮದ್ಯದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಲ್ಲಸಂದ್ರ ಬಾಬಣ್ಣ ಲೇಔಟ್ ನಲ್ಲಿ ನಡೆದಿದೆ.
ಹೇಮಂತ್ ಮೃತ ದುರ್ದೈವಿಯಾಗಿದ್ದಾರೆ. ಆರೋಪಿಗಳನ್ನು ಕಿರಣ್, ಅಕ್ಷಯ್ ಎಂದು ಗುರುತಿಸಲಾಗಿದೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಆರೋಪಿಗಳು ಕುಡಿದು ಹೇಮಂತ್ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಹೇಮಂತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಹೇಮಂತ್ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.