ನೆಲ್ಯಾಡಿ: ಮನೆಯ ಅಂಗಳದಲ್ಲೇ ಯುವಕನ ಬರ್ಬರ ಹತ್ಯೆ! - Mahanayaka

ನೆಲ್ಯಾಡಿ: ಮನೆಯ ಅಂಗಳದಲ್ಲೇ ಯುವಕನ ಬರ್ಬರ ಹತ್ಯೆ!

police
10/05/2025


Provided by

ನೆಲ್ಯಾಡಿ: ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶರತ್(35) ಎಂಬ ಯುವಕ ಹತ್ಯೆಗೀಡಾದವ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲೇ ಬರ್ಬರ ಹತ್ಯೆ ನಡೆದಿದ್ದು, ಹತ್ಯೆಗೆ ಬಳಸಲಾಗಿರುವ ಚಾಕು ಸ್ಥಳದಲ್ಲಿ ಪತ್ತೆಯಾಗಿದೆ.

ಘಟನೆಗೆ ಕೌಟುಂಬಿಕ ಕಲಹ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಇನ್ನಷ್ಟೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ