ಮಲತಂದೆಯಿಂದ ಇಬ್ಬರು ಬಾಲಕಿಯರ ಬರ್ಬರ ಹತ್ಯೆ!

24/08/2024
ಬೆಂಗಳೂರು: ಮಲತಂದೆಯಿಂದಲೇ ಇಬ್ಬರು ಬಾಲಕಿಯರು ಭೀಕರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ದಾಸರಹಳ್ಳಿಯಲ್ಲಿ ನಡೆದಿದೆ.
ಸುಮಾರು 14 ಮತ್ತು 16 ವರ್ಷದ ಇಬ್ಬರು ಹೆಣ್ಣು ಮಕ್ಕಳು ಹತ್ಯೆಗೀಡಾದವರು ಎಂದು ತಿಳಿದು ಬಂದಿದೆ. ಮಲತಂದೆ ಸುಮಿತ್ ಎಂಬಾತ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ನೆಲೆಸಿರುವ ಉತ್ತರ ಭಾರತ ಮೂಲದ ಮಹಿಳೆಯ ಮನೆಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು, ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಡಾಗ್ ಸ್ಕ್ವಾಡ್, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಹಾಗೂ ಸೊಕೊ ಟೀಂ ಭೇಟಿ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: