ಕೂಲಿ ಕೆಲಸಕ್ಕೆ ತೆರಳಿದ್ದ ಇಬ್ಬರು ಮಹಿಳೆಯರ ಬರ್ಬರ ಹತ್ಯೆ! - Mahanayaka

ಕೂಲಿ ಕೆಲಸಕ್ಕೆ ತೆರಳಿದ್ದ ಇಬ್ಬರು ಮಹಿಳೆಯರ ಬರ್ಬರ ಹತ್ಯೆ!

police
07/04/2024

ಕಲಬುರಗಿ:  ಕೂಲಿ ಕೆಲಸಕ್ಕೆ ತೆರಳಿದ್ದ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ತಾವರಗೇರಾ ಕ್ರಾಸ್ ಬಳಿ ನಡೆದಿದೆ.

ಕೆ.ಕೆ.ನಗರ ನಿವಾಸಿ ಶರಣಮ್ಮ(51),  ತಾಜ್ ಸುಲ್ತಾನ್ ಪುರ ನಿವಾಸಿ  ಚಂದಮ್ಮ(53) ಹತ್ಯೆಗೀಡಾದ ಮಹಿಳೆಯರು ಎಂದು ಗುರುತಿಸಲಾಗಿದೆ. ಎಂದಿನಂತೆ ಇಂದು ಕೂಡ ಕೂಲಿ ಕೆಲಸಕ್ಕೆ ತೆರಳಿದ್ದ ಮಹಿಳೆಯರ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕಲಬುರಗಿ ಗ್ರಾಮಾಂತರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.


Provided by

ಕೊಲೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ, ಸದ್ಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಪೊಲೀಸರ ತನಿಖೆಯ ಬಳಿಕ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ