11:18 AM Saturday 23 - August 2025

ಹೆದ್ದಾರಿಯ ಉದ್ದಕ್ಕೂ ಕಿಲೋ ಮೀಟರ್ ಗಟ್ಟಲೆ ಕಾಂಡಮ್ ಪತ್ತೆ | ಅಷ್ಟಕ್ಕೂ ನಡೆದದ್ದೇನು?

tumkur road
08/09/2021

ತುಮಕೂರು: ಹೆದ್ದಾರಿ ರಸ್ತೆಯೊಂದರಲ್ಲಿ ಕಿಲೋ ಮೀಟರ್ ಗಟ್ಟಲೆ  ಕಾಂಡಮ್ ಸುರಿದಿರುವ ಘಟನೆ ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪತ್ತೆಯಾಗಿದ್ದು, ಈ ಕಾಂಡಮ್ ಗಳನ್ನು ಯಾರು ಈ ರೀತಿಯಾಗಿ ಸುರಿದಿದ್ದಾರೆ, ಅವರ ಉದ್ದೇಶವೇನು ಎನ್ನುವುದು ತಿಳಿದು ಬಂದಿಲ್ಲ.

ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರ, ಬಟವಾಡಿ ಮಾರ್ಗದ ರಸ್ತೆ ಬದಿಯ ಉದ್ದಕ್ಕೂ ಕಾಂಡಮ್ ಗಳು ಬಿದ್ದಿವೆ. ಆರಂಭದಲ್ಲಿ ಯಾವುದಾದರೂ ಅಪಘಾತ ಸಂಭವಿಸಿ ವಾಹನದಿಂದ ಕಾಂಡಮ್ ಗಳು ಸುರಿದಿವೆ ಎಂದು ಅನುಮಾನ ವ್ಯಕ್ತಪಡಿಸಲಾಗಿತ್ತು. ಆದರೆ, ಈ ಪ್ರದೇಶದಲ್ಲಿ ಯಾವುದೇ ಅಪಘಾತಗಳು ಆಗಿಲ್ಲ ಎನ್ನುವುದು ತಿಳಿದು ಬಂದಿತ್ತು.

ಬೇರೆ ಎಲ್ಲಿಂದಲೋ ಕಾಂಡಮ್ ತಂದು ರಸ್ತೆಯ ಬದಿಯಲ್ಲಿ ಉದ್ದಕ್ಕೂ ಯಾವುದೋ ವಾಹನದಿಂದ ಕಾಂಡಮ್ ಸುರಿದಿರಬಹುದು ಎನ್ನುವ ಅನುಮಾನಗಳು ಇದೀಗ ಕೇಳಿ ಬಂದಿದೆ. ಇಂದು ಬೆಳಗ್ಗೆ  ಈ ರಸ್ತೆಯಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರಿಗೆ ಇದೊಂದು ಅಚ್ಚರಿಯ ದೃಶ್ಯವಾಗಿತ್ತು. ಏನಾಗಿದೆ ಎನ್ನುವುದು ಮಾತ್ರ ಯಾರಿಗೂ ತಿಳಿದು ಬಂದಿಲ್ಲ.

ಇನ್ನಷ್ಟು ಸುದ್ದಿಗಳು…

ಮೂವರು ವಿದ್ಯಾರ್ಥಿನಿಯರಿಗೆ, ನೀವು ಧರಿಸಿರುವ ಉಡುಪು ಕಳಚಿ ಎಂದ 50 ವರ್ಷದ ಪ್ರಾಂಶುಪಾಲ!

ಜಾತ್ಯತೀತ ಹೆಸರಿನಲ್ಲಿ ಮುಸ್ಲಿಮರನ್ನು ವಂಚಿಸಲಾಗುತ್ತಿದೆ | ಅಸಾದುದ್ದೀನ್ ಓವೈಸಿ ಆಕ್ರೋಶ

ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ನಾನು ಹೇಳಿಲ್ಲ | ಉಲ್ಟಾ ಹೊಡೆದ ಕೊರಿಯೋಗ್ರಾಫರ್ ಕಿಶೋರ್ ಅಮನ್ ಶೆಟ್ಟಿ!

ಐದು ರಾಜ್ಯಗಳ ಚುನಾವಣಾ ಉಸ್ತುವಾರಿಗಳ ಹೆಸರು ಪ್ರಕಟಿಸಿದ ಬಿಜೆಪಿ: ಶೋಭಾ ಕರಂದ್ಲಾಜೆಗೂ ಸ್ಥಾನ

ರವಿಶಂಕರ್ ಗುರೂಜಿ ಆಶ್ರಮದವರಿಗೇ ಮಂಕುಬೂದಿ ಎರಚಿ ವಂಚಿಸಿದ ನಕಲಿ ಐಎಎಸ್ ಅಧಿಕಾರಿ!

ಅನುಶ್ರೀ ಮುಖವಾಡ ಕಳಚಿದೆ, ಜೈಲಿಗೆ ಹೋಗೋದು ಪಕ್ಕಾ | ಪ್ರಶಾಂತ್ ಸಂಬರ್ಗಿ

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ | ಕಾರಿನಲ್ಲಿದ್ದ ಇಬ್ಬರ ದುರಂತ ಸಾವು

ಪ್ರೀತಿಸಿ ವಿವಾಹವಾಗಿದ್ದವರನ್ನು ಜಾತಿಗಾಗಿ ಬೇರ್ಪಡಿಸಿದರು! | ಫೇಸ್ ಬುಕ್ ಲೈವ್ ಗೆ ಬಂದು ಯುವಕ ಆತ್ಮಹತ್ಯೆ

ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ | ಕಾರಿನಲ್ಲಿದ್ದ ಇಬ್ಬರ ದುರಂತ ಸಾವು

 

ಇತ್ತೀಚಿನ ಸುದ್ದಿ

Exit mobile version