ಬಿಗ್ ಬ್ರೇಕಿಂಗ್ ನ್ಯೂಸ್: ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿ ವಜಾ - Mahanayaka
7:56 AM Wednesday 15 - October 2025

ಬಿಗ್ ಬ್ರೇಕಿಂಗ್ ನ್ಯೂಸ್: ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿ ವಜಾ

16/02/2021

ಪುದುಚೇರಿ:  ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ ಎಂದು ರಾಷ್ಟ್ರಪತಿ ಭವನವು ಮಂಗಳವಾರ ರಾತ್ರಿ ಅಧಿಕೃತ ಆದೇಶ ಪ್ರಕಟಿಸಿದೆ.


Provided by

ಹೊಸ ರಾಜ್ಯಪಾಲರ ನೇಮಕವಾಗುವವರೆಗೂ ತೆಲಂಗಾಣದ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್ ಅವರಿಗೆ ಪುದುಚೆರಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ಪುದುಚೆರಿಯ ರಾಜ್ಯಪಾಲರ ಹುದ್ದೆಯನ್ನು ನಿರ್ವಹಿಸುವುದರಿಂದ ಕಿರಣ್ ಬೇಡಿ ಅವರನ್ನು ತಡೆಯಲಾಗಿದೆ. ಹೊಸ ರಾಜ್ಯಪಾಲರ ನೇಮಕವಾಗುವವರೆಗೆ ತೆಲಂಗಾಣದ ರಾಜ್ಯಪಾಲರಾದ ತಮಿಳುಸಾಯಿ ಸೌಂದರರಾಜನ್ ಅವರಿಗೆ ಪುದುಚೆರಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ಹೇಳಿಕೆ ಪ್ರಕಟಿಸಿದೆ.

ಪುದುಚೆರಿಯ ವಿಧಾನಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇದ್ದಾಗ ಕೇಂದ್ರ ಸರ್ಕಾರ ರಾಜ್ಯಪಾಲರ ಬದಲಾವಣೆ ಮಾಡಿದೆ. ಪುದುಚೇರಿಯ ಅಭಿವೃದ್ಧಿಗೆ ಕೇಂದ್ರದ ಆಣತಿಯಂತೆ ಕಿರಣ್ ಬೇಡಿ ಅಡ್ಡಿ ಮಾಡುತ್ತಿದ್ದರು ಎಂಬ ಆರೋಪಗಳು ಕೇಳಿ ಬಂದಿತ್ತು.

ಕಳೆದ ತಿಂಗಳು ಪುದುಚೇರಿಯಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ ಇಬ್ಬರು ಶಾಸಕರು ಕಿರಣ್ ಬೇಡಿ ಅವರನ್ನು ರಾಜ್ಯಪಾಲರ ಹುದ್ದೆಯಿಂದ ತೆಗೆಯಬೇಕೆಂಬ ಬೇಡಿಕೆ ಮುಂದಿಟ್ಟಿದ್ದರು ಹೇಳಲಾಗಿದೆ.

ಇತ್ತೀಚಿನ ಸುದ್ದಿ