10:54 PM Thursday 15 - January 2026

ಫ್ಯಾಟ್ ಸರ್ಜರಿ ವೇಳೆ ಕನ್ನಡ ಕಿರುತೆರೆ ನಟಿ ಚೇತನಾ ರಾಜ್ ಸಾವು

chethana raj
17/05/2022

ಬೆಂಗಳೂರು:  ಕಾಸ್ಮೆಟಿಕ್ ಸರ್ಜರಿಯ ವೇಳೆ ಕನ್ನಡ ಕಿರುತೆರೆ ನಟಿಯೊಬ್ಬರು ದುರಂತ ಸಾವಿಗೀಡಾದ ಘಟನೆ ಇಂದು ನಡೆದಿದ್ದು,  ವೈದ್ಯರ ನಿರ್ಲಕ್ಷ್ಯದಿಂದ ನಟಿ ಸಾವನ್ನಪ್ಪಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಸಾವಿಗೀಡಾಗಿದ್ದು, ಮಾಹಿತಿಗಳ ಪ್ರಕಾರ ಪೋಷಕರಿಗೆ ಯಾವುದೇ ಮಾಹಿತಿ ನೀಡದೇ ನಟಿ ಸರ್ಜರಿ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಫ್ಯಾಟ್ ಸರ್ಜರಿ ವೇಳೆ ಶ್ವಾಸಕೋಶದಲ್ಲಿ ನೀರಿನಾಂಶ ಶೇಖರಣೆಯಾದ ಪರಿಣಾಮ ನಟಿಯ ಸಾವು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ನಿನ್ನೆ  ಬೆಳಗ್ಗೆ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಾಲ್ಕು ಗಂಟೆಗ ವೇಳೆಗೆ ಅವರ ಆರೋಗ್ಯ ಗಂಭೀರವಾಗಿದೆ ಎನ್ನಲಾಗಿದೆ.

ಆರೋಗ್ಯದಲ್ಲಿ ಏರುಪೇರುಗೊಂಡ ಹಿನ್ನೆಲೆಯಲ್ಲಿ ಶಂಕರಮಠದ ಕಾಡೇ ಆಸ್ಪತ್ರೆಗೆ ಅವರನ್ನು ಶಿಫ್ಟರ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಚೇತನಾ ರಾಜ್ ಅವರು ಗೀತಾ, ದೊರೆಸಾನಿ ಸೇರಿದಂತೆ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದರು. ಚೇತನಾ ಅವರು ನಟಿಸಿರುವ ಹವಾಯಾಮಿ ಚಿತ್ರ ಇನ್ನಷ್ಟೆ ತೆರೆ ಕಾಣಬೇಕಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ed8Qj9yS882JNjUvoz0kbs

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎತ್ತಂಗಡಿ

ಶ್ರೀಗುರುದತ್ತಾತ್ರೇಯ ಪೀಠದ ಹೋಮ ನಡೆಯುವ ಸ್ಥಳದಲ್ಲಿ ನಾನ್ ವೆಜ್ ಊಟ, ಭಕ್ತರಿಂದ ಆಕ್ರೋಶ

ಬುದ್ಧ ಪೂರ್ಣಿಮೆ: ನೇಪಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ

ಮಗಳನ್ನು ಸಾಕಲು 36 ವರ್ಷಗಳಿಂದ ಪುರುಷ ವೇಷ ಧರಿಸಿ ಬದುಕುತ್ತಿರುವ ಮಹಿಳೆ!

ಇತ್ತೀಚಿನ ಸುದ್ದಿ

Exit mobile version