ಹರ್ಯಾಣ ಚುನಾವಣೆ: ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಕಿಸಾನ್ ನಿರ್ಧಾರ
ಮುಂಬರುವ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷವನ್ನು ಬೆಂಬಲಿಸದಿರಲು ಮತ್ತು ವಿರೋಧಿಸದಿರಲು ಹರ್ಯಾಣದ ಜಿಂದ್ ಜಿಲ್ಲೆಯ ಉಚಾನಾದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‍ನಲ್ಲಿ ನಿರ್ಧರಿಸಲಾಗಿದೆ.
ಹರ್ಯಾಣ, ಪಂಜಾಬ್ ಹಾಗೂ ಇತರ ರಾಜ್ಯಗಳಿಂದ ಆಗಮಿಸಿದ ರೈತರು, ಭಾರತೀಯ ಕಿಸಾನ್ ನೌಜವಾನ್ ಯೂನಿಯನ್ ಆಯೋಜಿಸಿದ್ದ ಮಹಾಪಂಚಾಯತ್‍ನಲ್ಲಿ ಭಾಗವಹಿಸಿದ್ದರು. ಜಗಜೀತ್ ಸಿಂಗ್ ದಲ್ಲೇವಾಲ್, ಶ್ರವಣ್ ಸಿಂಗ್ ಪಂಧರ್ ಮತ್ತು ಅಭಿಮನ್ಯು ಕೋಹಡ್ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.
ಈ ಚುನಾವಣೆಗೂ ನಮಗೂ ಯಾವುದ ಸಂಬಂಧವಿಲ್ಲ. ಚಳವಳಿಯನ್ನು ಬಲಗೊಳಿಸುವುದು ನಮ್ಮ ಉದ್ದೇಶ. ನಾವು ಯಾವ ಪಕ್ಷವನ್ನೂ ಬೆಂಬಲಿಸುವುದಿಲ್ಲ ಅಥವಾ ವಿರೋಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ರೈತರ ಚಳವಳಿಯನ್ನು ಬಲಪಡಿಸುವ ಉದ್ದೇಶದಿಂದ ನಾವು ಸರ್ಕಾರದ ವೈಫಲ್ಯಗಳ ಬಗ್ಗೆ ಮತ್ತು ರೈತವಿರೋಧಿ ನೀತಿಗಳ ಬಗ್ಗೆ ಜನಜಾಗೃತಿ ಮೂಡಿಸುತ್ತಿದ್ದೇವೆ ಎಂದು ಮುಖಂಡರು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth