ಕೊಡಗು ಚಲೋ ಮುಂದೂಡಿಕೆ: ಇದು ನನ್ನ ನಿರ್ಧಾರವಲ್ಲ ಪಕ್ಷದ ನಿರ್ಧಾರ: ಸಿದ್ದರಾಮಯ್ಯ ಸ್ಪಷ್ಟನೆ

siddaramaiha
23/08/2022

ಬೆಂಗಳೂರು:   ಕೊಡಗು ಚಲೋ ಸದ್ಯಕ್ಕೆ ರದ್ದು ಪಡಿಸಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದು, ಕೊಡಗು ಚಲೋ ನನ್ನ ನಿರ್ಧಾರವಲ್ಲ ಪಕ್ಷದ ನಿರ್ಧಾರ ಎಂದು ಸ್ಪಷ್ಟಪಡಿಸಿದ್ದಾರೆ.

ವಿಪಕ್ಷ ನಾಯಕನಾಗಿ ನಾನು ಪ್ರತಿಭಟನೆ ಮಾಡುವುದಿಲ್ಲ, ಮಾಜಿ ಸಿಎಂ ಆಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷ ಮೀರಿ ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕೊಡಗು ಚಲೋ ನನ್ನ ನಿರ್ಧಾರವಲ್ಲ, ಪಕ್ಷದ ನಿರ್ಧಾರವಾಗಿದೆ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಕಾನೂನು ಉಲ್ಲಂಘಿಸುವುದಿಲ್ಲ. ಸ್ನೇಹಿತರ ಜೊತೆಗೆ ಚರ್ಚಿಸಿ ಕೊಡಗು ಚಲೋ ಮುಂದೂಡಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹೇಳಿಕೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version