11:59 PM Thursday 29 - January 2026

ಕೊಡಗಿನ ಇಬ್ಬರು ಯುವತಿಯರ ವಿಡಿಯೋ ವೈರಲ್: ಬಿಬಿಎ ವಿದ್ಯಾರ್ಥಿ ಬಂಧನ

savad
29/01/2026

ಮಡಿಕೇರಿ: ಕೊಡಗಿನ ಕಾಲೇಜು ವಿದ್ಯಾರ್ಥಿನಿಯರ ಜೊತೆಗಿನ ಅಶ್ಲೀಲ ದೃಶ್ಯಗಳನ್ನು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪದ ಮೇಲೆ 21 ವರ್ಷದ ಬಿಬಿಎ ವಿದ್ಯಾರ್ಥಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಡಗು ಜಿಲ್ಲೆಯ ನಿವಾಸಿ, ಪ್ರಸ್ತುತ ಬೆಂಗಳೂರಿನ ಕಾಲೇಜೊಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿರುವ ಮೊಹಮ್ಮದ್ ಸವಾದ್ ಎಂದು ಗುರುತಿಸಲಾಗಿದೆ.

ಪ್ರಕರಣದ ಹಿನ್ನೆಲೆ: ಜನವರಿ 21 ರಂದು ಕೊಡಗು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಂ.ಎಸ್. ಪ್ರಸನ್ನ ಭಟ್ ಅವರ ವಾಟ್ಸಾಪ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬರು ಈ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಯುವಕ ಮತ್ತು ಇಬ್ಬರು ಯುವತಿಯರ ಅಶ್ಲೀಲ ವಿಡಿಯೋಗಳು ಹರಿದಾಡುತ್ತಿರುವುದನ್ನು ಗಮನಿಸಿದ ಪ್ರಸನ್ನ ಭಟ್ ಅವರು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪೊಲೀಸ್ ತನಿಖೆ: ದೂರಿನ ಆಧಾರದ ಮೇಲೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿ ಮೊಹಮ್ಮದ್ ಸವದ್‌ ನನ್ನು ಬಂಧಿಸಿದ್ದಾರೆ. ತನಿಖೆಯ ವೇಳೆ ಆರೋಪಿಯು ಕೊಡಗಿನ ಯುವತಿಯರೊಂದಿಗೆ ಸ್ನೇಹ ಬೆಳೆಸಿ, ಅವರೊಂದಿಗಿನ ಖಾಸಗಿ ಕ್ಷಣಗಳನ್ನು ತನ್ನ ಮೊಬೈಲ್‌ ನಲ್ಲಿ ಚಿತ್ರೀಕರಿಸಿಕೊಂಡಿರುವುದು ತಿಳಿದುಬಂದಿದೆ.

ವರದಿಗಳ ಪ್ರಕಾರ, ಆರೋಪಿಯ ಮೊಬೈಲ್ ಆತನ ಸ್ನೇಹಿತರ ಕೈಗೆ ಸಿಕ್ಕಿದ್ದು, ಅವರು ಈ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇನ್ನೊಂದೆಡೆ ಆರೋಪಿಗೆ ಹಲ್ಲೆ ನಡೆಸಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version