ಕೋಲಾರ ಕೈ ಟಿಕೆಟ್ ಕಗ್ಗಂಟು: ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ಮುಂದಾದ ಜಿಲ್ಲೆಯ ಕಾಂಗ್ರೆಸ್ ಶಾಸಕರು!

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿದೆ. ನಾಯಕರ ನಡುವಿನ ಭಿನ್ನಮತ ಶಮನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸತತ ಪ್ರಯತ್ನ ಮಾಡಿದರೂ ಇನ್ನೂ ಶಮನವಾಗಿಲ್ಲ.
ಸಚಿವ ಕೆ.ಎಚ್.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಜಿಲ್ಲೆಯ ಐವರು ಶಾಸಕರು ಪಟ್ಟು ಹಿಡಿದಿದ್ದಾರೆ. ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದ್ದೇ ಆದಲ್ಲಿ ಜಿಲ್ಲೆಯ ಐವರು ಶಾಸಕರು ರಾಜೀನಾಮೆ ನೀಡುತ್ತೇವೆ ಎಂದು ಹೇಳಿದ್ದಾರೆ.
ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ಐವರು ಶಾಸಕರು ರಾಜೀನಾಮೆ ನೀಡುವ ಬಗ್ಗೆ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಕೆ.ಎಚ್.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಬಾರದು ಎಂದು ಮನವಿ ಮಾಡಿದ್ದೇವೆ. ಒಂದು ವೇಳೆ ಟಿಕೆಟ್ ನೀಡಿದರೆ, ಮಾಲೂರು ಶಾಸಕ ನಂಜೇಗೌಡ, ಸಚಿವ ಎಂ.ಸಿ.ಸುಧಾಕರ್, ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್, ನಜೀರ್ ಅಹ್ಮದ್ ರಾಜೀನಾಮೆ ನೀಡುತ್ತೇವೆ ಎಂದು ಹೇಳಿದ್ದಾರೆ.
12 ಗಂಟೆ ಸುಮಾರಿಗೆ ಸಭಾಪತಿಯ ಕಚೇರಿಗೆ ಭೇಟಿ ನೀಡಿ ರಾಜೀನಾಮೆ ಸಲ್ಲಿಸುತ್ತೇವೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಪ್ರಯಾಣಿಸುತ್ತೇವೆ, 4 ಗಂಟೆಗೆ ಸಭಾಪತಿಯನ್ನು ಭೇಟಿ ಮಾಡಲಿದ್ದೇವೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth