ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣ: 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ
20/09/2026
ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ದಾಖಲಿಸಲಾಗಿದ್ದು, ಈ ಪೈಕಿ ಆರು ಮಂದಿ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ.
ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನವ್ ರೈ (32), ತೇಜಾಕ್ಷ (24) ಮತ್ತು ರಂಜಿತ್ (35) ಎಂಬವರ ವಿರುದ್ಧ ಕಾನೂನು ಬದ್ಧವಾಗಿ ಗೂಂಡಾ ಕಾಯ್ದೆ ಹೇರಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

























