10:50 PM Wednesday 15 - October 2025

ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ: ಇಬ್ಬರು ರೌಡಿಶೀಟರ್ ಗಳ ಬಂಧನ

mangalore
11/04/2022

ಮಂಗಳೂರು: ಕೋಳಿ ಮಾರಾಟದ ಅಂಗಡಿ ಮುಂದೆ ಗಲಾಟೆ ನಡೆಸಿದ ಅಂಗಡಿ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪದ ಮೇಲೆ ಇಬ್ಬರು ರೌಡಿ ಶೀಟರ್ ಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಮ್ ಪೂಜಾರಿ (27 ), ಎಕ್ಕೂರು ನಿವಾಸಿ ಧೀರು ಯಾನೆ ಧೀರಜ್ ಕುಮಾರ್ ( 25) ಎಂದು ಗುರುತಿಸಲಾಗಿದೆ.

ವೆಲೆನ್ಶಿಯಾ ಜಂಕ್ಷನ್ ಬಳಿಯ ಐಡಿಯಲ್ ಚಿಕನ್ ಅಂಗಡಿಯ ಮುಂಭಾಗದಲ್ಲಿ ಆರೋಪಿಗಳಿಬ್ಬರು ಸಾರ್ವಜನಿಕನೊಬ್ಬನಿಗೆ ಹಲ್ಲೆ ನಡೆಸುತ್ತಿದ್ದರು. ಇದನ್ನು ಅಂಗಡಿ ಸಿಬ್ಬಂದಿ ಪ್ರಶ್ನಿಸಿದಾಗ ಆರೋಪಿಗಳು ಅಂಗಡಿ ಸಿಬ್ಬಂದಿಗಳಾದ ಸುನಿಲ್ ಮಾರ್ಡಿ, ಅನಂತ ಮತ್ತು ಜೀವನ್ ಎಂಬವರಿಗೆ ಹೆಲ್ಮೆಟ್, ಕಲ್ಲುಗಳಿಂದ ಹೊಡೆದು ಗಾಯಗೊಳಿಸಿದ್ದು, ಬಳಿಕ ಸಿಬ್ಬಂದಿಗೆ ಚೂರಿಯಿಂದ ಇರಿಯಲು ಯತ್ನಿಸಿದ್ದಾರೆ. ಈ ವೇಳೆ ಸಾರ್ವಜನಿಕರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ.

ಆರೋಪಿಗಳಿಂದ ಎರಡು ಚೂರಿಗಳು, ಕಲ್ಲು, ಹೆಲ್ಮೆಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ವೈದ್ಯಕೀಯ ತಪಾಸಣೆ ವೇಳೆಗೆ ಇಬ್ಬರೂ ಮದ್ಯಸೇವನೆ ಮಾಡಿರುವುದು ಮತ್ತು ಪ್ರೀತಮ್ ಗಾಂಜಾ ಸೇವನೆ ಮಾಡಿರುವುದು ಪತ್ತೆಯಾಗಿದೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜೋಗ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ

ಯಾರಾಗಲಿದ್ದಾರೆ ಪಾಕಿಸ್ತಾನದ ನೂತನ ಪ್ರಧಾನಿ?

ರಾಮನವಮಿ ಆಚರಿಸಿದ ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮುಸ್ಲಿಮ್ ವ್ಯಾಪಾರಿಯ ಮೇಲೆ ದಾಳಿ ಪ್ರಕರಣ: ಓರ್ವ ಕಿಡಿಗೇಡಿಯ ಬಂಧನ

ಇಂಧನ ಬೆಲೆ ಏರಿಕೆ: ವಿಮಾನದಲ್ಲಿ ಸ್ಮೃತಿ ಇರಾನಿ, ಕಾಂಗ್ರೆಸ್ ನಾಯಕ ನಡುವೆ ಜಟಾಪಟಿ

ಇತ್ತೀಚಿನ ಸುದ್ದಿ

Exit mobile version