9:45 AM Wednesday 20 - August 2025

ಕೋಳಿಯನ್ನು ಹಿಡಿಯುವ ಅರ್ಜೆಂಟಿನಲ್ಲಿ ಬಾವಿಗೆ ಬಿದ್ದ ಚಿರತೆ!

kadaba
07/11/2021

ಕಡಬ: ಕೋಳಿ ಹಿಡಿಯುವ ಆತುರದಲ್ಲಿ ಚಿರತೆಯೊಂದು ಬಾವಿಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕರ್ಮಕಜೆ ಎಂಬಲ್ಲಿ ಭಾನುವಾರ ನಡೆದಿದೆ.

ಕರ್ಮಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆಯ ಬಳಿಯಲ್ಲಿ ಕೋಳಿಯನ್ನು ಅಟ್ಟಿಕೊಂಡು ಬಂದ ಚಿರತೆ ಆಯ ತಪ್ಪಿ ಬಾವಿಗೆ ಬಿದ್ದಿದೆ. ಮಳೆಗಾಲವಾಗಿರುವುದರಿಂದಾಗಿ ಬಾವಿಯಲ್ಲಿ ನೀರು ತುಂಬಿದೆ. ಹೀಗಾಗಿ ಚಿರತೆಗೆ ಹಿಡಿದು ನಿಲ್ಲಲು ಕೂಡ ಸರಿಯಾದ ಸ್ಥಳ ಬಾವಿಯಲ್ಲಿ ಸಿಕ್ಕಿಲ್ಲ. ಹೀಗಾಗಿ  ನೀರಿನಲ್ಲಿ ಚಿರತೆ ತೇಲುತ್ತಿರುವ ದೃಶ್ಯ ಕಂಡು ಬಂದಿದೆ.

ಇನ್ನೂ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಚಿರತೆಯನ್ನು ರಕ್ಷಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version