ಅಪಘಾತ: ಕೋಲ್ಕತ್ತಾಗೆ ತೆರಳುತ್ತಿದ್ದ ರೈಲಿಗೆ ಬಂಗಾಳದಲ್ಲಿ ಗೂಡ್ಸ್ ರೈಲು ಡಿಕ್ಕಿ - Mahanayaka

ಅಪಘಾತ: ಕೋಲ್ಕತ್ತಾಗೆ ತೆರಳುತ್ತಿದ್ದ ರೈಲಿಗೆ ಬಂಗಾಳದಲ್ಲಿ ಗೂಡ್ಸ್ ರೈಲು ಡಿಕ್ಕಿ

17/06/2024

ಕಾಂಚನಜುಂಗಾ ಎಕ್ಸ್ ಪ್ರೆಸ್ ರೈಲು ಸೋಮವಾರ ಬಂಗಾಳದ ಸಿಲಿಗುರುನಲ್ಲಿ ಅಪಘಾತಕ್ಕೀಡಾಗಿದೆ. ರೈಲು ಕೋಲ್ಕತ್ತಾದ ಸೀಲ್ಡಾ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಸಿಲಿಗುರಿಯ ರಂಗಪಾಣಿ ಪ್ರದೇಶದಲ್ಲಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.


Provided by

ಅಪಘಾತದಲ್ಲಿ ಈವರೆಗೆ ಯಾವುದೇ ಸಾವು ಸಂಭವಿಸಿಲ್ಲ.
ಕಾಂಚನಜುಂಗಾ ಎಕ್ಸ್ ಪ್ರೆಸ್ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಸೀಲ್ಡಾಗೆ ಪ್ರಯಾಣವನ್ನು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ ಈ ಅಪಘಾತ ಸಂಭವಿಸಿದೆ.
ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ವೈದ್ಯರು ಮತ್ತು ಆಂಬ್ಯುಲೆನ್ಸ್ ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.

ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ವಿವರಗಳನ್ನು ನಿರೀಕ್ಷಿಸುತ್ತಿರುವಾಗ, ಕಾಂಚನ್‌ಜುಂಗಾ ಎಕ್ಸ್ ಪ್ರೆಸ್ ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್ ಗಳು ಮತ್ತು ವಿಪತ್ತು ತಂಡಗಳನ್ನು ರಕ್ಷಣಾ, ಚೇತರಿಕೆ, ವೈದ್ಯಕೀಯ ಸಹಾಯಕ್ಕಾಗಿ ಸ್ಥಳಕ್ಕೆ ರವಾನಿಸಲಾಗಿದೆ. ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ