ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ: ‘ದೇಶ ಆಘಾತಗೊಂಡಿದೆ’ ಎಂದ ರಾಹುಲ್ ಗಾಂಧಿ

ಕೊಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವುದರೊಂದಿಗೆ ಈ ಪ್ರಕರಣವನ್ನು ಮತ್ತೊಂದು ನಿರ್ಭಯಾ ರೀತಿಯ ಘಟನೆ ಎಂದು ಕರೆದಂತಿದೆ. ಈ ಅಸಹನೀಯ ನೋವಿನಲ್ಲಿ ತಾನು ಸಂತ್ರಸ್ತೆಯ ಕುಟುಂಬದೊಂದಿಗೆ ನಿಲ್ಲುತ್ತೇನೆ ಮತ್ತು ಅವರಿಗೆ ಯಾವುದೇ ಬೆಲೆ ತೆತ್ತಾದರೂ ನ್ಯಾಯ ಸಿಗಬೇಕು ಮತ್ತು ಅಪರಾಧಿಗಳಿಗೆ ಸಮಾಜದಲ್ಲಿ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ರಾಹುಲ್ ಗಾಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಭೀಕರ ಘಟನೆಯಿಂದ ಇಡೀ ದೇಶ ಆಘಾತಕ್ಕೊಳಗಾಗಿದೆ. ಆಕೆಯ ವಿರುದ್ಧದ ಕ್ರೂರ ಮತ್ತು ಅಮಾನವೀಯ ಕೃತ್ಯದ ಘಟನೆಗಳು ಬಹಿರಂಗಗೊಳ್ಳುತ್ತಿರುವ ರೀತಿಯನ್ನು ನೋಡಿದ್ರೆ ವೈದ್ಯರ ಸಮುದಾಯ ಮತ್ತು ಮಹಿಳೆಯರಲ್ಲಿ ಅಭದ್ರತೆಯ ವಾತಾವರಣವಿದೆ. ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ಆರೋಪಿಗಳನ್ನು ಉಳಿಸುವ ಪ್ರಯತ್ನವು ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತದ ಮೇಲೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ” ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ವೈದ್ಯಕೀಯ ಕಾಲೇಜಿನಂತಹ ಸ್ಥಳದಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ, ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಅಧ್ಯಯನಕ್ಕಾಗಿ ಹೊರಗೆ ಕಳುಹಿಸಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು. “ಈ ಘಟನೆಯು ವೈದ್ಯಕೀಯ ಕಾಲೇಜಿನಂತಹ ಸ್ಥಳದಲ್ಲಿ ವೈದ್ಯರು ಸುರಕ್ಷಿತವಾಗಿಲ್ಲದಿದ್ದರೆ, ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಅಧ್ಯಯನಕ್ಕಾಗಿ ಹೊರಗೆ ಕಳುಹಿಸುವುದು ಹೇಗೆ ಎಂದು ಯೋಚಿಸುವಂತೆ ಮಾಡಿದೆ. ನಿರ್ಭಯಾ ಪ್ರಕರಣದ ನಂತರ ಮಾಡಿದ ಕಠಿಣ ಕಾನೂನುಗಳು ಸಹ ಇಂತಹ ಅಪರಾಧಗಳನ್ನು ತಡೆಗಟ್ಟುವಲ್ಲಿ ಏಕೆ ವಿಫಲವಾಗಿವೆ? ಹತ್ರಾಸ್ ನಿಂದ ಉನ್ನಾವೊವರೆಗೆ ಮತ್ತು ಕಥುವಾದಿಂದ ಕೋಲ್ಕತ್ತಾವರೆಗೆ ಮಹಿಳೆಯರ ವಿರುದ್ಧ ನಿರಂತರವಾಗಿ ಹೆಚ್ಚುತ್ತಿರುವ ಘಟನೆಗಳ ಬಗ್ಗೆ ಪ್ರತಿ ಪಕ್ಷ, ಸಮಾಜದ ಪ್ರತಿಯೊಂದು ವರ್ಗವು ಗಂಭೀರ ಚರ್ಚೆಗಳನ್ನು ನಡೆಸಬೇಕಾಗಿದೆ ಮತ್ತು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth