ತರಬೇತಿ ವೈದ್ಯೆಯ ಅತ್ಯಾಚಾರ ಕೊಲೆ ಕೇಸ್: ಮಮತಾ ಬ್ಯಾನರ್ಜಿ ಸೂಕ್ತ ಕ್ರಮ ಕೈಗೊಂಡಿದ್ದಾರೆ; ಅಖಿಲೇಶ್ ಯಾದವ್

ಕ್ರೂರವಾಗಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸಂತ್ರಸ್ತ ತರಬೇತಿ ವೈದ್ಯೆಯ ಸಾವನ್ನು ಖಂಡಿಸಿ ನ್ಯಾಯಕ್ಕಾಗಿ ದೇಶಾದ್ಯಂತ ವೈದ್ಯರು ಪ್ರತಿಭಟನೆ ನಡೆಸುತ್ತಿದ್ರೆ ರಾಜಕೀಯ ಪಕ್ಷಗಳು ಈ ವಿಷಯದ ಸೂಕ್ಷ್ಮತೆಯ ಹೊರತಾಗಿಯೂ ದೂಷಣೆಯ ಆಟದಲ್ಲಿ ತೊಡಗಿವೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನೈಜ ಅಪರಾಧಿಗಳನ್ನು ರಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದ್ದರೆ, ಈಗ ಸಮಾಜವಾದಿ ಪಕ್ಷದ ಮುಖಂಡ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ.
“ಮಮತಾ ಬ್ಯಾನರ್ಜಿ ಸ್ವತಃ ಮಹಿಳೆ. ಹೀಗಾಗಿ ಮಹಿಳೆಯ ನೋವನ್ನು ಅರ್ಥಮಾಡಿಕೊಳ್ಳುತ್ತಾರೆ. ಬೇಡಿಕೆಗೆ ಅನುಗುಣವಾಗಿ ಅವರು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣವನ್ನು ಸಿಬಿಐ ಅಥವಾ ಇನ್ನಾವುದೇ ಸಂಸ್ಥೆಯಿಂದ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ. ಆದರೆ ಇದರೊಂದಿಗೆ, ಭಾರತೀಯ ಜನತಾ ಪಕ್ಷವು ರಾಜಕೀಯ ಮಾಡಬಾರದು” ಎಂದು ಅಖಿಲೇಶ್ ಯಾದವ್ ಹೇಳಿದ್ದುಈ ಘಟನೆಗಳ ರಾಜಕೀಯ ಲಾಭವನ್ನು ಬಿಜೆಪಿ ಪಡೆಯಬಾರದು ಎಂದು ಹೇಳಿದರು.
ಮತ್ತೊಂದೆಡೆ, ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಬಿಜೆಪಿ ಟಿಎಂಸಿ ಮೇಲೆ ದಾಳಿ ಮುಂದುವರಿಸಿದೆ. ವೈದ್ಯಕೀಯ ಕಾಲೇಜು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಿರ್ಣಾಯಕ ಪ್ರಶ್ನೆಗಳನ್ನು ಎತ್ತಿರುವ ಮಾಜಿ ಕೇಂದ್ರ ಸಚಿವೆ ಮತ್ತು ಬಿಜೆಪಿ ನಾಯಕಿ ಸ್ಮೃತಿ ಇರಾನಿ, ಘಟನೆಯ ಸುತ್ತಲಿನ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth