ಸಿಎಂ ಬೊಮ್ಮಾಯಿಗೆ ಕೊವಿಡ್: ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದು

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೊವಿಡ್ ಸೋಂಕು ತಗಲಿದ್ದು, ಪರಿಣಾಮವಾಗಿ ಅವರ ದೆಹಲಿ ಪ್ರವಾಸ ರದ್ದುಗೊಂಡಿದೆ.
ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿ ಪ್ರವಾಸ ರದ್ದಾಗಿರುತ್ತದೆ ಎಂದು ಹೇಳಿದ್ದಾರೆ.
ಸಿಎಂ ದೆಹಲಿ ಪ್ರವಾಸಕ್ಕೆ ಎಲ್ಲವು ಸಿದ್ಧವಾಗಿತ್ತು. ಎಲ್ಲವು ಅಂದುಕೊಂಡಂತೆ ನಡೆದಿದ್ದರೆ, ಇಂದು ಬೊಮ್ಮಾಯಿ ಅವರು ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ನೀತಿ ಆಯೋಗದ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಕರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ದೆಹಲಿ ಪ್ರವಾಸ ರದ್ದಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka