ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಂದ ಕೇಸರಿ ಶಾಲು ಧರಿಸಿ ಪ್ರತಿಭಟನೆ!

koppa
05/01/2022

ಕೊಪ್ಪ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತರಗತಿಗಳಿಗೆ ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್  ಕಾರ್ಯಕರ್ತರು ಕಾಲೇಜು ಆವರಣದಲ್ಲಿ ಕೇಸರಿ ಶಾಲು ಧರಿಸಿ ಪ್ರತಿಭಟನೆ ಮಾಡಿದರು.

ಕೆಲವು ವಿದ್ಯಾರ್ಥಿನಿಯರು ಸೋಮವಾರ ಕೇಸರಿ ಶಾಲು ಧರಿಸಿ ಬಂದು ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಿರುವುದರ ವಿರುದ್ಧ ಪರೋಕ್ಷ ಪ್ರತಿಭಟನೆ ತೋರಿದ್ದರು. ಮಂಗಳವಾರ ಮತ್ತೆ ಪ್ರತಿಭಟನೆ ಮುಂದುವರಿದು, ಶಾಲಾ ಆಡಳಿತ ಮಂಡಳಿ ವಿರುದ್ಧವೂ ಘೋಷಣೆ ಕೂಗಲಾಗಿದ್ದು, ಸಮವಸ್ತ್ರದ ವಿಚಾರದಲ್ಲಿ ಆಡಳಿತ ಮಂಡಳಿ ಭೇದ ಭಾವ ತೋರುತ್ತಿದೆ ಎಂದು ಆರೋಪಿಸಿದರು.

ಘಟನೆ ಸಂಬಂಧ ಪ್ರಾಂಶುಪಾಲ ಡಾ.ಎಸ್.ಅನಂತ ಮಾತನಾಡಿ, ಜನವರಿ 10ರಂದು ಪೋಷಕರ ಸಭೆ ಕರೆದು ತೀರ್ಮಾನ ಕೈಗೊಳ್ಳುವವರೆಗೆ ವಿದ್ಯಾರ್ಥಿನಿಯರು ಶಾಂತವಾಗಿ ವರ್ತಿಸಬೇಕು ಎಂದು ಹೇಳಿದರು.

ಪ್ರಾಂಶುಪಾಲರ ಮಾತಿನ ಬಳಿಕ ಪ್ರತಿಭಟನಾಕಾರರು ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಂಗಳೂರು ವಿವಿ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ:  ಕ್ಯಾಂಪಸ್ ಫ್ರಂಟ್

ಸೊಸೆಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿದ ಮಾವ!

ತಂದೆಯ ಕತ್ತು ಸೀಳಿ ಹತ್ಯೆ ಮಾಡಿದ ಪಾಪಿ ಮಗ!

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಯಾವ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ? | ಏನೇನು ನಿರ್ಬಂಧಗಳಿವೆ?

ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಮಾರಣಾಂತಿಕ ಹಲ್ಲೆ: ಬೆಚ್ಚಿ ಬೀಳಿಸುತ್ತೆ ವಿಡಿಯೋ

ಇತ್ತೀಚಿನ ಸುದ್ದಿ

Exit mobile version