4:35 AM Thursday 16 - October 2025

ಕೊರಗ ಸಮುದಾಯದ ಮೆಹೆಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಲಾಠಿ ಚಾರ್ಜ್!

koraga
28/12/2021

ಕೋಟ: ಮಹೆಂದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿ ಶಾಂತಿ ಭಂಗ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಕೊರಗ ಕಾಲನಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಕಾಲನಿಯ ರಾಜೇಶ್ ಎಂಬವರ ಮೆಹೆಂದಿ ಕಾರ್ಯಕ್ರಮ ನಡೆದಿದ್ದು, ಡಿಜೆ ಹಾಕಲಾಗಿತ್ತು ಎನ್ನಲಾಗಿದೆ. ಡಿಜೆ ಶಬ್ದದಿಂದ ಸ್ಥಳೀಯರಿಗೆ ತೊಂದರೆಯಾಗಿದ್ದು, ಈ ಹಿನ್ನೆಲೆಯಲ್ಲಿ ಅವರು, ಪೊಲೀಸರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ  ಕೋಟಾ ಠಾಣಾಧಿಕಾರಿ ಸಂತೋಷ್ ಬಿ.ಪಿ. ನೇತೃತವದ ತಂಡ ಸ್ಥಳಕ್ಕೆ ಆಗಮಿಸಿ, ಡಿಜೆ ಆಫ್ ಮಾಡುವಂತೆ ಹೇಳಿದ್ದಾರನ್ನಲಾಗಿದೆ.

ಊರಿನಲ್ಲಿ ಎಲ್ಲರ ಮನೆಯ ಕಾರ್ಯಕ್ರಮದಲ್ಲಿಯೂ  ಡಿಜೆ ಹಾಕುತ್ತಾರೆ, ನಮ್ಮ ಜಾತಿಯವರಿಗೆ ಮಾತ್ರವೇ ಯಾಕೆ ಈ ನಿರ್ಬಂಧ ಎಂದು ಕುಟುಂಬಸ್ಥರು ಪೊಲೀಸರೊಂದಿಗೆ ವಾದಿಸಿದ್ದಾರೆ ಎನ್ನಲಾಗಿದ್ದು,  ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದರು ಎನ್ನಲಾಗಿದೆ.

ಇದರ ವಿರುದ್ಧ ಕೊರಗ ಸಮುದಾಯದವರು ರಾತ್ರಿ ಕೋಟಾ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು, ವಶಪಡಿಸಿಕೊಂಡವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಬಳಿಕ ಕೊರಗ ಸಮುದಾಯದ ಮುಖಂಡರು ಪೊಲೀಸರೊಂದಿಗೆ ಮಾತುಕತೆ ನಡೆಸಿ ವಶಪಡಿಸಿಕೊಂಡವರನ್ನು ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಪೊಲೀಸರ ಲಾಠಿ ಚಾರ್ಜ್ ವೇಳೆ ಹಲವರಿಗೆ ಗಾಯವಾಗಿದ್ದು, ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೊರಗ ಸಮುದಾಯದ ಮಹಿಳೆಯರು, ಮಕ್ಕಳು ಮಹಿಳೆಯರು ಎಂದೂ ನೋಡದೇ ಪೊಲೀಸರು ಹಲ್ಲೆ ನಡೆಸಿದ್ದಾರೆ. ಮದುಮಗನಿಗೆ ಕೂಡ ಹಲ್ಲೆ ನಡೆಸಿದ್ದಾರೆ. ಮಹಿಳಾ ಪೊಲೀಸ್ ಪೇದೆ ಇಲ್ಲದೇ ನಮ್ಮ ಮನೆಗೆ ನುಗ್ಗಿದ್ದಾರೆ ಎಂದು ಆರೋಪಿಸಿದ್ದಾರೆ.

ಘಟನೆ ಸಂಬಂಧ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ಮಾತನಾಡಿ,  ಘಟನೆಯ ಸಂಪೂರ್ಣ ತನಿಖೆ ನಡೆಸಿ ಕೊರಗ ಸಮುದಾಯಕ್ಕೆ ನ್ಯಾಯ ಒದಗಿಸುವುದಾಗಿ ತಿಳಿಸಿದ್ದಾರೆ. ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕ್ರಮಕೈಗೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಜನರಿಗೊಂದು ನ್ಯಾಯ, ನಾಯಕರಿಗೊಂದು ನ್ಯಾಯ: ಬಿಜೆಪಿ ಕಾರ್ಯಕರಣಿ ಸಭೆಯಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ

ಅಂತ್ಯ ಸಂಸ್ಕಾರಕ್ಕೆ ಕೆಲವೇ ನಿಮಿಷ ಬಾಕಿ ಇರುವಾಗ ಕಣ್ತೆರೆದು ಮಾತನಾಡಿದ ವೃದ್ಧ!

ಗ್ರಾಮದ ಮುಖ್ಯಸ್ಥೆಯ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆ

ನೈಟ್ ಕರ್ಫ್ಯೂಗೆ ಪದೇ ಪದೇ ವಿರೋಧ ಮಾಡೋದು ಸರಿಯಲ್ಲ: ಸಚಿವ ಕೆ.ಸುಧಾಕರ್

ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಮಹಿಳೆಯ ಬರ್ಬರ ಹತ್ಯೆ

ಸೆಲ್ಫಿ ತೆಗೆದುಕೊಳ್ಳಲು ಬಂದ ಬೆಂಬಲಿಗನ ಮೇಲೆ ತಿರುಗಿ ಬಿದ್ದ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

Exit mobile version