ಮೈಸೂರಿನಲ್ಲಿ ನಿರ್ಮಿಸಲಾಗಿದ್ದ ಕೊರಗಜ್ಜನ ದೈವಸ್ಥಾನ ತೆರವು!

ಮೈಸೂರು: ಮೈಸೂರಿನಲ್ಲಿ ನಿರ್ಮಿಸಲಾಗಿದ್ದ ಕರಾವಳಿಯ ನಂಬಿಕೆ ಕೊರಗಜ್ಜನ ದೈವಸ್ಥಾನ ಸಾಕಷ್ಟು ಚರ್ಚೆಗೀಡಾಗಿತ್ತು. ಇದೀಗ ಮೈಸೂರು ಜಿಲ್ಲಾಡಳಿತ ಕೊರಗಜ್ಜ ದೈವಸ್ಥಾನವನ್ನು ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ.
ಕೊರಗಜ್ಜನ ದೈವಸ್ಥಾನವನ್ನು ಯಾವುದೇ ವಿವಾದಕ್ಕೆ ಸಂಬಂಧಿಸಿದಂತೆ ತೆರವುಗೊಳಿಸಿಲ್ಲ, ಬದಲಾಗಿ ದೈವಸ್ಥಾನವನ್ನು ರಾಜಾಕಾಲುವೆ ಮೇಲೆ ನಿರ್ಮಿಸಲಾಗಿರುವ ಹಿನ್ನೆಲೆ, ಕೇರ್ಗಳ್ಳಿ ಗ್ರಾಮದ ಸರ್ವೇ ನಂಬರ್ 60 ರಲ್ಲಿ ಹಾದುಹೋಗಿದ್ದ ರಾಜ ಕಾಲುವೆ ಒತ್ತುವರಿ ಆಗಿದೆ ಎಂಬ ದೂರು ತಾಲೂಕು ಆಡಳಿತಕ್ಕೆ ಬಂದಿತ್ತು. ಅಕ್ರಮವಾಗಿ ದೈವಸ್ಥಾನ ನಿರ್ಮಿಸಲಾಗಿದೆ ಎಂಬ ಮಾಹಿತಿ ಇತ್ತು. ಈ ಕಾರಣ ಮೈಸೂರು ತಾಲೂಕು ಕೇರ್ಗಳ್ಳಿ ಗ್ರಾಮದಲ್ಲಿದ್ದ ಕೊರಗಜ್ಜ ದೈವಸ್ಥಾನವನ್ನು ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ.
ದಾಖಲೆಗಳನ್ನು ಪರಿಶೀಲಿಸಿ ಉಪವಿಭಾಗಾಧಿಕಾರಿ ಕೆ.ರಕ್ಷಿತ್ ಒತ್ತುವರಿಯಾಗಿರುವ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ. ಹಾಗೂ ಒತ್ತುವರಿಯನ್ನು ತೆರವುಗೊಳಿಸುವಂತೆ ಆದೇಶಿಸಿದ್ದಾರೆ.
ತಹಶೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ರವರು ಜಯಪುರ ಪೊಲೀಸರ ಭದ್ರತೆಯೊಂದಿಗೆ ಕಾರ್ಯಾಚರಣೆ ಮಾಡಿ ರಾಜಾಕಾಲುವೆಯ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕೊರಗಜ್ಜ ದೈವಸ್ಥಾನವನ್ನು ನೆಲಸಮಗೊಳಿಸಿ ತೆರವುಗೊಳಿಸಿದ್ದಾರೆ.
ಜಯಪುರ ಹೋಬಳಿ ಉಪತಹಶೀಲ್ದಾರ್ ನಿಂಗಪ್ಪ, ರಾಜಸ್ವ ನಿರೀಕ್ಷಕರಾದ ಲೋಹಿತ್, ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು, ಬೋಗಾದಿ ಪಟ್ಟ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ನಗರಮಾಪನ ಯೋಜನಾಧಿಕಾರಿಗಳ ಕಚೇರಿ ಸಿಬ್ಬಂದಿ ಹಾಗೂ ಜಯಪುರ ಪೋಲೀಸ್ ಠಾಣೆ ಅಧಿಕಾರಿ ಹಾಗೂ ಸಿಬ್ಬಂದಿ ಭಾಗಿಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth