ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ: ಈಶ್ವರಪ್ಪ ಬಂಡಾಯ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ

kota shrinivas pujari
16/03/2024

ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ  ಪ್ರತಿಕ್ರಿಯಿಸಿದ್ದು, ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ ಎಂದು ಹೇಳಿದ್ದಾರೆ.

ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ, ಗೊಂದಲಗಳು ಬಗೆಹರಿಯುತ್ತೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ ಎಂದು ಪೂಜಾರಿ ಹೇಳಿದರು.

ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು,  ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ.  ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ,  ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರ ಬಹುದು ಎಂದು ಅವರು ಹೇಳಿದರು.

ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ ಎಂದು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಕೋಟ ಶ್ರೀನಿವಾಸ ಪೂಜಾರಿ  ಹೇಳಿಕೆ ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version