ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್ - Mahanayaka
11:10 AM Thursday 21 - August 2025

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

kotekar bank
20/01/2025


Provided by

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು  ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮುರುಗನ್ಡಿ, ಮಣಿವಣ್ಣನ್ ಹಾಗೂ ಪ್ರಕಾಶ್ ಅಲಿಯಾಸ್ ಜೋಷ್ವಾ ಬಂಧಿತ ಆರೋಪಿಗಳಾಗಿದ್ದಾರೆ.  ತಮಿಳುನಾಡಿನ ಮಧುರೈ ಸಮೀಪ ದರೋಡೆಕೋರರನ್ನು ಪೊಲೀಸರ ತಂಡ ಬಂಧಿಸಿದೆ.  ದರೋಡೆ ನಡೆಸಿದ ಬಳಿಕ ದರೋಡೆಕೋರರು ತಲಪಾಡಿ ಟೋಲ್ ಮೂಲಕ ಕೇರಳಕ್ಕೆ ಪರಾರಿಯಾಗಿದ್ದರು.

ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ನಲ್ಲಿ ಹಗಲು ದರೋಡೆಯೇ ನಡೆದಿತ್ತು. ಮಧ್ಯಾಹ್ನ 1.10ಕ್ಕೆ  ಕೋಟೆಕಾರು ಸಹಕಾರಿ ಬ್ಯಾಂಕ್ ಗೆ ನುಗ್ಗಿದ್ದ ದರೋಡೆಕೋರರು ಕೇವಲ 5 ನಿಮಿಷದಲ್ಲೇ ಹಣ ಮೂಟೆಕಟ್ಟಿಕೊಂಡು ಹೋಗಿದ್ದರು.

ಬರೋಬ್ಬರಿ 12 ಕೋಟಿ ಮೌಲ್ಯದ ನಗದು, ಚಿನ್ನಾಭರಣ ದರೋಡೆಕೋರರ ಪಾಲಾಗಿದೆ.  ದರೋಡೆ ನಂತರ ಪೊಲೀಸರ ದಿಕ್ಕು ತಪ್ಪಿಸಲು ಆರೋಪಿಗಳು ಬ್ಯಾಂಕ್ ಸಿಬ್ಬಂದಿಯ ಮೊಬೈಲ್ ಕಿತ್ತುಕೊಂಡು ನಗರ ಸುತ್ತಿ, ಕದ್ರಿ ರಸ್ತೆ ಬಳಿ ಮೊಬೈಲ್ ಎಸೆದು ಪರಾರಿಯಾಗಿದ್ದರು. ದರೋಡೆಕೋರರ ಬುದ್ಧಿವಂತಿಕೆಯನ್ನೂ ಭೇದಿಸಿ, ಇದೀಗ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನಷ್ಟು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ