ಕೊಟ್ಟಿಗೆಹಾರ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಐ–20 ಕಾರು; ಚಾಲಕ ಪ್ರಾಣಾಪಾಯದಿಂದ ಪಾರು
ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲನಾಡ್ ಕೆಫೆ ಸಮೀಪ ನಡೆದಿದೆ.
ಮಂಗಳೂರಿನಿಂದ ಮೂಡಿಗೆರೆ ಕಡೆಗೆ ಸಂಚರಿಸುತ್ತಿದ್ದ ಹ್ಯುಂಡೈ ಐ-20 (i20) ಕಾರು ಮಲ್ಲನಾಡ್ ಕೆಫೆ ಬಳಿ ಬರುತ್ತಿದ್ದಂತೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ಕಾರು ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ವಿದ್ಯುತ್ ಕಂಬ ಹಾಗೂ ಕಾರಿನ ಮುಂಭಾಗ ಜಖಂಗೊಂಡಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ. ಗಾಯಾಳುವನ್ನು ಮೊದಲು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























