ಬೈಕ್ ಸವಾರರ ಮೇಲೆ ದಾಳಿ ನಡೆಸಿದ ಕಾಡುಕೋಣ: ಇಬ್ಬರ ಸ್ಥಿತಿ ಗಂಭೀರ

kottigehara
27/01/2023

ಕೊಟ್ಟಿಗೆಹಾರ:  ಇಬ್ಬರು ಬೈಕ್ ಸವಾರರ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಗಟ್ಟೆ ಬಳಿ ನಡೆದಿದೆ.

ದೀಲಿಪ್ ,ಆಶಾ ಎಂಬವರು ಕಾಡುಕೋಣ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ರಾತ್ರಿ ಮೂಡಿಗೆರೆ ಪಟ್ಟಣದಿಂದ ಕಲ್ಯಾಣಗದ್ದೆ ಗ್ರಾಮಕ್ಕೆ‌ ತೆರಳುತ್ತಿದ್ದ ವೇಳೆ ಏಕಾಏಕಿ ಬೈಕ್ ನ ಮೇಲೆ ಕಾಡು ಕೋಣ ದಾಳಿ ನಡೆಸಿದೆ.

kottigehara

ಕಾಡುಕೋಣದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಡುಕೋಣದ ದಾಳಿಯ ಪರಿಣಾಮ ಬೈಕ್ ನಜ್ಜುಗುಜ್ಜಾಗಿದೆ. ಘಟನೆ ಹಿನ್ನೆಲೆಯಲ್ಲಿ ಕಾಡುಕೋಣ ದಾಳಿಯ ಕುರಿತು ಸ್ಥಳೀಯರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version