ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಉಸ್ತುವಾರಿಯಾಗಿ ಜಾನಿ ಕೆ.ಪಿ. ನೇಮಕ

24/07/2025
ಬೆಂಗಳೂರು: ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯಿಂದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಉಸ್ತುವಾರಿಯಾಗಿ ಜಾನಿ.ಕೆ.ಪಿ. ನೇಮಕಗೊಂಡಿದ್ದಾರೆ.
ಮಾಜಿ ಸಚಿವರೂ ಕೆ.ಪಿ.ಸಿ.ಸಿ. ಪ್ರಚಾರ ಸಮಿತಿಯ ಅಧ್ಯಕ್ಷರೂ ಆದ ವಿನಯಕುಮಾರ್ ಸೊರಕೆ, ಜಾನಿ ಕೆ.ಪಿ.ಯವರನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ಉಸ್ತುವಾರಿಯಾಗಿ ನೇಮಿಸಿ ಆದೇಶ ಹೊರಡಿಸಿರುತ್ತಾರೆ. ಈಗಾಗಲೇ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ಕೆ.ಪಿ.ಜಾನಿ ನೇಮಕವಾಗಿದ್ದಾರೆ.
ಸಚಿವ ಸಂತೋಷ್ ಲಾಡ್ ಅಧ್ಯಕರಾಗಿರುವ ಕರ್ನಾಟಕ ಸರಕಾರದ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕರಾಗಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: