ಅಜ್ಜಯ್ಯನ ಮೊರೆ ಹೋದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಹೆಲಿಕಾಪ್ಟರ್ ಅಪಘಾತದಿಂದ ಪಾರಾಗುತ್ತಿದ್ದಂತೆಯೇ ಡಿಕೆಶಿವಕುಮಾರ್ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿದ್ದಾರೆ. ಹೆಲಿಕಾಪ್ಟರ್ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಮುಂಭಾಗದ ಗಾಜು ಪುಡಿ ಪುಡಿಯಾಗಿತ್ತು. ನಿನ್ನೆ ಡಿಕೆಶಿ ಜಕ್ಕೂರಿನಿಂದ ಮುಳಬಾಗಿಲುಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು.
ಈ ಘಟನೆ ಬಳಿಕ ಡಿಕೆಶಿ ಇಂದು ತುಮಕೂರು ಜಿಲ್ಲೆಯ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದು ಅಜ್ಜಯ್ಯನ ಆಶೀರ್ವಾದಕ್ಕೆ ಪಾತ್ರರಾಗಿದ್ದಾರೆ. ಅಲ್ಲದೇ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕಾನಾಥ್ ಬಳಿಯೂ ಸಮಾಲೋಚನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























