12:19 PM Saturday 31 - January 2026

ಕೆಪಿಸಿಸಿ ಕಚೇರಿಯಲ್ಲಿ ಇಬ್ಬರು ನಾಯಕರ ನಡುವೆ ಮಾರಾಮಾರಿ?

22/01/2021

ಬೆಂಗಳೂರು:  ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು,  ಆದರೆ ಕಾಂಗ್ರೆಸ್ ಇದನ್ನು ನಿರಾಕರಿಸಿದೆ. ಇಂತಹ ಯಾವುದೇ ಘಟನೆಗಳು ನಡೆದಿಲ್ಲ ಎಂದು ಹೇಳಿದೆ.

ಕಾಂಗ್ರೆಸ್ ಎಂಎಲ್ ಸಿ ನಾರಾಯಣ ಸ್ವಾಮಿ  ಮತ್ತು ರಾಜಾಜಿ ನಗರ ಕಾಂಗ್ರೆಸ್ ಮುಖಂಡ ಮನೋಹರ್ ಕೈಕೈ ಮಿಲಾಯಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನೂ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ನೀಡಿರುವ ಹೇಳಿಕೆಯ ಪ್ರಕಾರ, ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿ ಬಂದಿದ್ದೇವೆ.  ಇನ್ನೂ ಪಂಚಾಯತ್ ಚುನಾವಣೆ ಸಂಬಂಧ ಬಿಜೆಪಿ ಆಪರೇಷನ್ ಮಾಡಿದೆ ಎಂಬ ವಿಚಾರದ ಬಗ್ಗೆ ಚರ್ಚೆಯಾಗುತ್ತಿತ್ತು.  ಈ ವೇಳೆ ಏರುಧ್ವನಿಯಲ್ಲಿ ಮಾತು ಆಗಿದೆಯೇ ಹೊರತು ಯಾರೂ ಕೈಕೈ ಮಿಲಾಯಿಸಿಕೊಂಡಿಲ್ಲ ಎಂದು ಹೇಳಿದ್ದಾರೆಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

Exit mobile version