6:37 AM Wednesday 28 - January 2026

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ ನೀಡಿದ ಸಿಎಂ ಯಡಿಯೂರಪ್ಪ

13/12/2020

ಬೆಂಗಳೂರು: ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಹಿ ಸುದ್ದಿ ನೀಡಿದ್ದು, ರಾಜ್ಯ ಪೊಲೀಸರ್ ಇಲಾಖೆಯ ಉದ್ಯೋಗಗಳಲ್ಲಿ ಶೇ.2ರಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಒಲಿಂಪಿಕ್ ಸಂಸ್ಥೆ ಆಯೋಜಿಸಿದ್ದ ಹಾಲ್ ಆಫ್ ಫೇಮ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರೀಡೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪೊಲೀಸ್, ಅರಣ್ಯ, ಆರೋಗ್ಯ ಇಲಾಖೆ ಮತ್ತು ಸರ್ಕಾರದ ವಿವಿಧ ಇಲಾಖೆ ಹಾಗೂ ನಿಗಮಗಳಲ್ಲಿಯೂ ನೇರ ನೇಮಕಾತಿಯಲ್ಲಿ 2 ರಷ್ಟು ಮೀಸಲಿಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪೊಲೀಸ್ ಇಲಾಖೆಯಲ್ಲಿ ಶೇಕಡ 2 ರಷ್ಟು ಹುದ್ದೆಗಳ ನೇರ ನೇಮಕಾತಿ ಮೂಲಕ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಲಾಗುವುದು. ಶೀಘ್ರದಲ್ಲಿ ಈ ಕುರಿತು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುತ್ತದೆ ಎಂದು ಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

Exit mobile version