ರೆಂಜಾಳ: ಅ.19ರಂದು ಕೃಷಿ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ - Mahanayaka
3:07 AM Wednesday 11 - December 2024

ರೆಂಜಾಳ: ಅ.19ರಂದು ಕೃಷಿ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ

athma
18/10/2022

ರೆಂಜಾಳ: ಉಡುಪಿ ಜಿಲ್ಲಾ ಪಂಚಾಯತ್, ಕಾರ್ಕಳ ಕೃಷಿ ಇಲಾಖೆ,ರೆಂಜಾಳ ಕೃಷಿ ಕಿಸಾನ್ ರಕ್ಷಣಾ ಸಂಘ ಹಾಗೂ ರೆಂಜಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ಅ.19 ರಂದು ಕೃಷಿ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಇಲ್ಲಿನ ಮಹಾಲಕ್ಷ್ಮಿ ದೇವಸ್ಥಾನ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕಾರ್ಕಳ ಸಹಾಯಕ ಕೃಷಿ ನಿರ್ದೇಶಕ ಸತೀಶ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕಾ ವಿಜ್ಞಾನಿ ಡಾ.ಚೈತನ್ಯ, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಕೀಟ ಶಾಷ್ರಾಜ್ಞ ಡಾ.ಸಚಿನ್, ಕಾರ್ಕಳ ಸಹಾಯಕ ಕೃಷಿ ಅಧಿಕಾರಿ ಸಿದ್ದಪ್ಪ ತುಡುಬಿನ್ , ಕೃಷಿ ಅಧಿಕಾರಿ ರಮೇಶ್ ಡಿ. ಉಳ್ಳಾಗಡ್ಡಿ, ಕಾರ್ಕಳ ತಾಂತ್ರಿಕ ವ್ಯವಸ್ಥಾಪಕಿ ಚೈತ್ರಾ ಶ್ರೀ, ರೆಂಜಾಳ ಕೃಷಿ ಕಿಸಾನ್ ರಕ್ಷಣಾ ಸಂಘದ ಅಧ್ಯಕ್ಷರಾದ ಸುಕೀರ್ತಿ ಜೈನ್, ಕಾರ್ಕಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕೃಷಿ ಅಧಿಕಾರಿ ಪ್ರಭಾಕರ್, ಅವರು ಭಾಗವಹಿಸುತ್ತಾರೆ ಎಂದು ರೆಂಜಾಳ ಕೃಷಿ ಕಿಸಾನ್ ರಕ್ಷಣಾ ಸಂಘ ಅಧ್ಯಕ್ಷರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ